Advertisement

ಅಭಿವೃದ್ಧಿ ಪೂರಕ ಹಾಗೂ ಚಲನಶೀಲ ಬಜೆಟ್‌: ಗೃಹ ಸಚಿವ ಆರಗ ಜ್ಞಾನೇಂದ್ರ

09:00 PM Mar 04, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2022-23ನೇ ಸಾಲಿನ ಆಯವ್ಯಯವು ರಾಜ್ಯದ ಎಲ್ಲಾ ಭಾಗಗಳ ಸಮಗ್ರ ಅಭಿವೃದ್ಧಿ ಪೂರಕ ದೃಷ್ಟಿಕೋನವನ್ನು ಹೊಂದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Advertisement

ಈ ಆಯವ್ಯಯ ಅಭಿವೃದ್ಧಿ ಪೂರಕ, ಚಲನ ಶೀಲ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಭರವಸೆ ಮೂಡಿಸುವ ಆಯವ್ಯಯವಾಗಿದೆ.

ಅಭಿವೃದ್ಧಿಯಲ್ಲಿ ರಾಜ್ಯವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಹಿನ್ನಲೆಯಲ್ಲಿ ಆರ್ಥಿಕತೆಯ ಬೆನ್ನೆಲುಬಾಗಿರುವ, ಮಾನವ ಸಂಪನ್ಮೂಲ, ಇಂಧನ, ನೀರವಾರಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಹಿಂದುಳಿದ, ಪರಿಶಿಷ್ಟ ಜಾತಿ ಜನಾಂಗ ಹಾಗೂ ಹಿಂದುಳಿದ ಪ್ರದೇಶಗಳ ಅಭಿವೃದ್ದಿ ಕಾರ್ಯಗಳಿಗೆ ಹೊಸ ಚೈತನ್ಯ ಒದಗಿಸುವ ನಿಟ್ಟಿನಲ್ಲಿ ಈ ಆಯವ್ಯಯವು ಭರವಸೆಯ ಬೆಳಕು ಮೂಡಿಸಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next