Advertisement
ಪ್ರಮುಖ ಅಂಶಗಳು-ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ ಮೂರು ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು.
– ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವಾಗಲಿದೆ.
– ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್/ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು.
– ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ವಿಪುಲ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು. ಜೊತೆಗೆ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸಲಾಗುವುದು.
– ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು.
– ಮೀನುಗಾರಿಕೆಗೆ ಈಗ ಲಭ್ಯವಿರುವ ಶೈತ್ಯಾಗಾರಗಳನ್ನು ದುಪ್ಪಟ್ಟುಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು.