Advertisement
ಬಿಜೆಪಿ ಅಧಿಕಾರ ವಹಿಸಿಕೊಂಡ ಅನಂತರ ನೀರಾವರಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಲಾಗಿದ್ದು 1.25 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸಲಾಗಿದೆ. ಇದೀಗ 1.5 ಲಕ್ಷ ಎಕ್ರೆ ಪ್ರದೇಶಕ್ಕೆ ನೀರಾವರಿ ಒದಗಿಸುವ ಗುರಿ ಹೊಂದಿದ್ದು 25 ಸಾವಿರ ಕೋಟಿ ರೂ. ಮೊತ್ತವನ್ನು ನೀರಾವರಿ ಕ್ಷೇತ್ರಕ್ಕೆ ಮೀಸಲಿಡಲಾಗಿದೆ.
Related Articles
Advertisement
ನೀರಾವರಿ ಆದ್ಯತೆ ದೃಷ್ಟಿಯಿಂದ 2022-23ನೇ ಸಾಲಿನಲ್ಲಿ 111,236 ಕೋಟಿ ರೂ. ಮೊತ್ತದ 38 ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಅದನ್ನು ಈ ವರ್ಷ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಲಾಗಿದೆ.
ಪ್ರಗತಿಯಲ್ಲಿರುವ ಜಗಳೂರು, ಕಿತ್ತೂರು, ಬಾಳಂಬೀಡ, ಹರಪನಹಳ್ಳಿ, ಯಾದಗಿರಿ, ರಾಯಚೂರಿನ ಕೆರೆ ತುಂಬಿಸುವ ಜತೆಗೆ ಸಸಾಲಟ್ಟಿ-ಶಿವಲಿಂಗೇಶ್ವರ, ಮಂಟೂರು ಮಹಾಲಕ್ಷ್ಮಿ ಮತ್ತು ವೆಂಕಟೇಶ್ವರ ಏತ ನೀರಾವರಿ ಯೋಜನೆ, ಪೂರಿಗಾಲಿ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಯೋಜನೆ ಈ ವರ್ಷ ಪೂರ್ಣಗೊಳಿಸಲಾಗುವುದು ಎಂದು ಬಜೆಟ್‌ನಲ್ಲಿ ಉಲ್ಲೇಖೀಸಲಾಗಿದೆ.
ಆನ್‌ಲೈನ್ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಸಿಸ್ಟಂನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿನ ಯೋಜನೆಗಳ ಪ್ರಗತಿ ಮೇಲ್ವಿಚಾರಣೆ ಹಾಗೂ ಗುತ್ತಿಗೆದಾರರಿಗೆ ನೇರವಾಗಿ ಆನ್‌ಲೈನ್ ಬಿಲ್ ಪಾವತಿಸಲು ಆನ್‌ಲೈನ್ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಸಿಸ್ಟಂ ಪ್ರಾರಂಭಿಸುವ ಬಗ್ಗೆ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಈ ವರ್ಷವೇ ಎತ್ತಿನ ಹೊಳೆ ನೀರು
ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಪ್ರಥಮ ಹಂತದ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು ತುಮಕೂರು ಜಿಲ್ಲೆಯವರೆಗಿನ ಗುರುತ್ವ ಕಾಲುವೆ ಮತ್ತು ಫೀಡರ್ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಈ ವರ್ಷ ನೀರು ಹರಿಸಲಾಗುವುದು. ಕೋಲಾರ, ಚಿಕ್ಕಬಳ್ಳಾಪುರ ಕೆರೆಗಳಿಗೆ ನೀರು ಹರಿಸುವ ಕಾಮಗಾರಿ ಮತ್ತು ಶ್ರೀನಿವಾಸಪುರ-ಕೋಲಾರ ಫೀಡರ್ ಚಾಲನೆಗಳ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸಲಿದೆ.
ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಹೂಡಿರುವ ದಾವೆ ಶೀಘ್ರ ಇತ್ಯರ್ಥಪಡಿಸಿ ಕಾಮಗಾರಿ ಪ್ರಾರಂಭಿಸಲು ಅಗತ್ಯ ಅನುದಾನ ಒದಗಿಸಲಾಗುವುದು. ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹಣ ಸಾಮರ್ಥ್ಯದ ಕೊರತೆ ನಿವಾರಿಸಲು ಕೊಪ್ಪಳ ಜಿಲ್ಲೆಯ ನವಲೆ ಬಳಿ ಸಮತೋಲನ ಜಲಾಶಯ ನಿರ್ಮಿಸಲು ಯೋಜನಾ ವರದಿ ಸಿದ್ಧವಾಗಿದ್ದು ಈ ಸಂಬಂಧ ಆಂಧ್ರ ಮತ್ತು ತೆಲಂಗಾಣ ಮುಖ್ಯಮಂತ್ರಿಯವರ ಜತೆ ಸಭೆ ನಡೆಸಿ ಯೋಜನೆ ಅನುಷ್ಠಾನಗೊಳಿಸಲಾಗುವುದು. ಮಹಾದಾಯಿ ಬದ್ಧತೆ
ಕಳಸಾ ಮತ್ತು ಬಂಡೂರಿ ನಾಲಾ ತಿರುವ ಯೋಜನೆಗಳಿಗೆ ಮಹಾದಾಯಿ ನ್ಯಾಯಮಂಡಳಿಯಿಂದ ಹಂಚಿಕೆಯಾದ 3.90 ಟಿಎಂಸಿ ನೀರಿನ ಬಳಕೆಗೆ ಯೋಜನಾ ವರದಿ ತಯಾರಿಸಿ ಸತತ ಪ್ರಯತ್ನದಿಂದ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಪಡೆಯಲಾಗಿದೆ. ಈ ಕಾಮಗಾರಿ ಪ್ರಾರಂಭಿಸಲು 1 ಸಾವಿರ ಕೋಟಿ ರೂ. ಮೀಸಲಿಟ್ಟು ತ್ವರಿತವಾಗಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಸರಕಾರದ ಪ್ರಯತ್ನದಿಂದಾಗಿ ರಾಷ್ಟ್ರೀಯ ಯೋಜನೆ ಮಾನ್ಯತೆ ದೊರಕಿದ್ದು 5,300 ಕೋಟಿ ರೂ. ಕೇಂದ್ರದ ಸಹಾಯಧನ ಲಭ್ಯವಾಗಿದ್ದು ಯೋಜನೆ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದು ಹೇಳಿದ್ದಾರೆ. ಹೊಸ ಘೋಷಣೆ
1. ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ 1 ಸಾವಿರ ಕೋಟಿ ರೂ.
2. 1.5 ಲಕ್ಷ ಎಕ್ರೆ ಕೃಷಿ ಜಮೀನಿಗೆ ನೀರಾವರಿ ಸಾಮರ್ಥ್ಯ ಹೆಚ್ಚಳ
3.ರೈತರಿಗೆ ಪರಿಕರ ಸಂಗ್ರಹಕ್ಕೆ ಭೂಸಿರಿ ಯೋಜನೆ
4.ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದ ಭರವಸೆ
5.ಎತ್ತಿನಹೊಳೆ ಯೋಜನೆಯಡಿ ತುಮಕೂರುವರೆಗೆ ಈ ವರ್ಷ ನೀರು
6.ನವಿಲೆ ಬಳಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಕ್ರಮ
7.ಆನ್‌ಲೈನ್ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಸಿಸ್ಟಂ ಆರಂಭ