ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ (ಫೆ.17) ವಿಧಾನಸಭೆಯಲ್ಲಿ ಎರಡನೇ ಬಾರಿ ಹಾಗೂ ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರದ ಕೊನೆಯ ಬಜೆಟ್ ಮಂಡಿಸಿದ್ದು, ಮೀನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ.
ಇದನ್ನೂ ಓದಿ:Karnataka Budget 2023:ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ,ಸಿರಿಧಾನ್ಯಕ್ಕೆ ಪ್ರೋತ್ಸಾಹ ಧನ
ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಯೋಜನೆ ಆರಂಭಿಸಲಾಗಿದ್ದು, ಇದನ್ನು ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಮನ್ವಯಗೊಳಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ತಿಳಿಸಿದ್ದಾರೆ.
ಮೀನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಘೋಷಿಸಿದರು. ಅಲ್ಲದೇ ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಮಾರ್ಪಡಿಸಲು 40 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಘೋಷಿಸಿದ್ದಾರೆ.
ಚರ್ಮಗಂಟು ರೋಗವನ್ನು ತಡೆಗಟ್ಟಲು ಒಂದು ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ನೀಡಲಾಗಿದ್ದು, ಈ ಸೋಂಕಿನಿಂದ ಸಾವನ್ನಪ್ಪಿರುವ ರಾಸುಗಳ ಮಾಲೀಕರಿಗೆ ಪರಿಹಾರ ನೀಡಲು 55 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.