Advertisement

ಕುಮಟಾ- ಸವಣೂರಿನಲ್ಲಿ ಬೃಹತ್ ಆಸ್ಪತ್ರೆ ನಿರ್ಮಾಣ; ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?

11:59 AM Feb 17, 2023 | Team Udayavani |

ಬೆಂಗಳೂರು: 2023-24ನೇ ಸಾಲಿನ ಆಯವ್ಯಯ ಪತ್ರದಲ್ಲಿ ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ ಅವರು ಆರೋಗ್ಯ ಕ್ಷೇತ್ರಕ್ಕೆ ಭರಪೂರ ನೆರವು ನೀಡಿದ್ದಾರೆ.

Advertisement

ಮನೆ ಮನೆಗೆ ಆರೋಗ್ಯ ಕಾರ್ಯಕ್ರಮ ಜಾರಿ ಮಾಡಿದ್ದಾರೆ. ಹಾವೇರಿ ಜಿಲ್ಲೆ ಸವಣೂರಿನಲ್ಲಿ 165 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದರು.

‘ಸಹ್ಯಾದ್ರಿ ಸಿರಿ’ ಯೋಜನೆ ಕುಮಟಾದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ, ಕರಾವಳಿ ಮಲೆನಾಡಿಗೆ ‘ಸಹ್ಯಾದ್ರಿ ಸಿರಿ’ ಯೋಜನೆ ಘೋಷಿಸಿದರು.

100 ಸಮುದಾಯ ಆರೋಗ್ಯ ಕೇಂದ್ರ ಅಭಿವೃದ್ಧಿಗೆ 781 ಕೋಟಿ ರೂ., ಜಯದೇವ ಆಸ್ಪತ್ರೆ ಜೊತೆಗೆ 45 ಆಸ್ಪತ್ರೆಗೆ ಮ್ಯಾಪಿಂಗ್, ಸಮುದಾಯ ಕೇಂದ್ರಗಳ ಮೇಲ್ದರ್ಜೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದರು.

ರಾಜ್ಯದಲ್ಲಿ ಆರು ಹೊಸ ಇಎಸ್ಐ ಆಸ್ಪತ್ರೆಗಳ ಸ್ಥಾಪನೆ ಮಾಡಲಾಗುವುದು. ರಾಜ್ಯದಲ್ಲಿ 19 ಕಾರ್ಮಿಕ ವಿಮಾ ಚಿಕಿತ್ಸಾಲಯಗಳ ಸ್ಥಾಪನೆ ಮತ್ತು ದಾವಣಗೆರೆ ಇಎಸ್ಐ ಆಸ್ಪತ್ರೆಯಲ್ಲಿ ಹಾಸಿಗೆಗಳ ಸಾಮರ್ಥ್ಯವನ್ನು 50ರಿಂದ 100ಕ್ಕೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.

Advertisement

ಇದನ್ನೂ ಓದಿ:ಉಚಿತ ಪದವಿಶಿಕ್ಷಣ, ಬಸ್ ಪಾಸ್, ರೈತನಿಧಿ ವಿಸ್ತರಣೆ; ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲೇನಿದೆ

ತಾಯಿ ಮಕ್ಕಳ ಆರೋಗ್ಯ ರಕ್ಷಣೆಗಾಗಿ ರಾಜ್ಯದ ವಿವಿಧೆಡೆ ತಾಯಿ ಮಕ್ಕಳ ಆಸ್ಪತ್ರೆ ಸ್ಥಾಪನೆ ಮಾಡಲಾಗುವುದು. ಅಪೌಷ್ಠಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಸಹಾಯಧನವನ್ನು 1000 ರೂ. ನಿಂದ 1500 ರೂ.ಗೆ ಏರಿಕೆ ಮಾಡಲಾಗುವುದು ಎಂದು ಘೋಷಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next