Advertisement

ಏಕೀಕೃತ ಬ್ರ್ಯಾಂಡಿಂಗ್‌ ವ್ಯವಸ್ಥೆ, ಸಾಲ ಮೊತ್ತ ಹೆಚ್ಚಳ; ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?

02:09 PM Jul 07, 2023 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 14ನೇ ರಾಜ್ಯ ಬಜೆಟ್ ಮಂಡಿಸಿದರು. ಮೂರು 27 ಸಾವಿರ ಕೋಟಿ ರೂ ಗಾತ್ರ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರ ಮಾಹಿತಿ ಇಲ್ಲಿದೆ

Advertisement

1 ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿತ್ತು. ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು.

2 ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ʻನವೋದ್ಯಮʼ ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲಾಗುವುದು.

3 ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ʻನಂದಿನಿʼ ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್‌ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು.

ಇದನ್ನೂ ಓದಿ:Budget: ಆಶಾಕಿರಣ ಯೋಜನೆ, ಸಿ.ಟಿ ಸ್ಕ್ಯಾನ್ ಸೆಂಟರ್; ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?

Advertisement

4 ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ ಸಹಾಯಧನ ನೀಡಲಾಗುವುದು.

5 ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಗೋದಾಮು, ಶೀತಲಗೃಹ ನಿರ್ಮಾಣ ಮತ್ತು ಇತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇ. 20ರಷ್ಟು, ಒಂದು ಕೋಟಿ ರೂ. ಮೀರದಂತೆ Seed Capital ಒದಗಿಸಲಾಗುವುದು.

6 ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕೆಪೆಕ್‌ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ನವೋದ್ಯಮಿಗಳು (Startups) ಮತ್ತು ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಐದು ಕೋಟಿ ರೂ.  ಒದಗಿಸಲಾಗುವುದು.

7 ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಿ, ಇವುಗಳಲ್ಲಿ 300 ಹೈಟೆಕ್‌ ಹಾರ್ವೆಸ್ಟರ್‌ ಹಬ್‌ಗಳನ್ನು ಹಂತಹಂತವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, 2023-24ನೇ ಸಾಲಿನಲ್ಲಿ 100 ಹಬ್‌ಗಳನ್ನು ಸ್ಥಾಪಿಸಲು 50 ಕೋಟಿ ರೂ. ಒದಗಿಸಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next