Advertisement

ಕರ್ನಾಟಕ ಬಜೆಟ್ 2023: ಏನಿದು ಸಹಸ್ರ ಸರೋವರ, ಸಹ್ಯಾದ್ರಿ ಸಿರಿ, ಜಲನಿಧಿ ಯೋಜನೆ?

12:19 PM Feb 17, 2023 | Team Udayavani |

ಬೆಂಗಳೂರು: ಸಹಸ್ರ ಸರೋವರ ಕಾರ್ಯಕ್ರಮದಡಿ ರಾಜ್ಯದಲ್ಲಿ 1,000 ಸಣ್ಣ ಸರೋವರಗಳನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ಸಹ್ಯಾದ್ರಿ ಸಿರಿ ಯೋಜನೆಯಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ ಅಣೆಕಟ್ಟು, ನಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಎರಡೂ ಯೋಜನೆಗಳಿಗಾಗಿ 75 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ (ಫೆ.17) ಮಂಡಿಸಿದ 2023-24ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ.

Advertisement

ಇದನ್ನೂ ಓದಿ:ಭಾರತದಲ್ಲಿನ ಎರಡು ಕಛೇರಿಗಳಿಗೆ ಟ್ವಿಟರ್‌ ಬೀಗ: ಸಿಬ್ಬಂದಿಗಳಿಗೆ ಮನೆಯಿಂದಲೇ ಕೆಲಸಕ್ಕೆ ಸೂಚನೆ

ಜಲನಿಧಿ ಯೋಜನೆ:

ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣಾ ಕಾಮಗಾರಿಗಳಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಎಂಬ ಹೊಸ ಯೋಜನೆ ಘೋಷಿಸಲಾಗಿದೆ. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ಎಲ್ಲಾ ರೈತರಿಗೆ ತಮ್ಮ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next