Advertisement

Electric ಬಸ್, ಸೋಲಾರ್ ಪಾರ್ಕ್, ಸ್ಕೈ-ಡೆಕ್… ಬೆಂಗಳೂರು ನಗರಾಭಿವೃದ್ದಿಗೆ ಸಿಕ್ಕಿದ್ದೇನು?

03:31 PM Feb 16, 2024 | Team Udayavani |

ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಯೋಜನೆಗಳಿಗೆ ಅಂಗೀಕಾರ ಹಾಕಿದ್ದಾರೆ. ಅದರಂತೆ ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ ಎಂದು ಹೇಳಿದರು.

Advertisement

ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ದ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ ಸುಂದರ ಬೆಂಗಳೂರು ನಿರ್ಮಾಣದ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.

2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ ನಿರೀಕ್ಷೆ ಇದೆ ಎಂದರು ಅಲ್ಲದೆ ಪ್ರಸಕ್ತ ಸಾಲಿನಿಂದ ಪರಿಷ್ಕೃತ ಜಾಹೀರಾತು ನೀತಿ ಮತ್ತು Premium FAR ನೀತಿಯನ್ನು ಜಾರಿಗೆ ತರುವ ಮೂಲಕ ಹೆಚ್ಚುವರಿಯಾಗಿ 2,000 ಕೋಟಿ ರೂ.ಗಳಷ್ಟು ತೆರಿಗೆಯೇತರ ಸಂಪನ್ಮೂಲ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದರು.

ಬಿಬಿಎಂಪಿ ವ್ಯಾಪ್ತಿಯ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ೨೦೨೪-೨೫ ರ ಸಾಲಿನಿಂದ ಮಾಲೀಕರಿಗೆ ಇ- ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳನ್ನು ದೊರಕಿಸಲಾಗುವುದು ಎಂದರು.

ನಗರದಲ್ಲಿ ಭೂಮಿಯ ಅಲಭ್ಯತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕುಗಳ ಕಾರಣ ಅಸ್ತಿತ್ವದಲ್ಲಿರುವ ರಸ್ತೆಗಳ ವಿಸ್ತರಣೆಯು ಅತ್ಯಂತ ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧರಿಸಿದೆ. ಈ ವರ್ಷ ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕವಾಗಿ ಟನೆಲ್ ಅನ್ನು ನಿರ್ಮಿಸಲಾಗುವುದು ಎಂದರು.

Advertisement

ಸುಗಮ ಸಂಚಾರ-ಬ್ರಾಂಡ್ ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದ ತಜ್ಞ ಯೋಜನೆಯಡಿ ಸಂಸ್ಥೆಯನ್ನು ನೇಮಿಸಿಕೊಳ್ಳಲಾಗಿದೆ. ಈ ಸಂಸ್ಥೆಯು ನೀಡುವ ವರದಿಯನ್ನು ಆಧರಿಸಿ, ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಬೆಂಗಳೂರು ನಗರದಲ್ಲಿ ಸುಮಾರು ೨೫೦ ಮೀಟರ್ ಎತ್ತರದಲ್ಲಿ ಸ್ಕೈ- ಡೆಕ್ ನಿರ್ಮಾಣ ಮಾಡಲಾಗುವುದಾಗಿ ತಿಳಿಸಿದರು, ನಗರಾಭಿವೃದ್ಧಿ ಇಲಾಖೆಯ ಅಂಗಸಂಸ್ಥೆಗಳಾದ BBMP, BMRCL, BWSSB, BDA ಗಳ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ್ ಸ್ಥಾಪಿಸಲಾಗುವುದು ಎಂದರು.

ದೇಶದಲ್ಲೇ ಅತ್ಯುತ್ತಮ ನಗರ ಸಾರಿಗೆ ವ್ಯವಸ್ಥೆಯಲ್ಲಿ ಒಂದಾಗಿರುವ ಬಿಎಂಟಿಸಿ ಮುಂದಿನ ದಿನಗಳಲ್ಲಿ 1,334 ನೂತನ ಎಲೆಕ್ಟ್ರಿಕ್ ಬಸ್ ಗಳನ್ನು ಪರಿಚಯಿಸಲಾಗುವುದಾಗಿ ಹೇಳಿದ್ದಾರೆ ಜೊತೆಗೆ ಬೆಂಗಳೂರು ಹಾಗೂ ಮಹಾನಗರ ಪಾಲಿಕೆಯಲ್ಲಿ ರಾತ್ರಿ ೧ ಗಂಟೆಯವರೆಗೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗುವುದಾಗಿ ಹೇಳಿದ್ದಾರೆ.

ಇದನ್ನೂಓದಿ: Kalaburagi Airport; ಫೆ.‌22ರಿಂದ ಕಲಬುರಗಿಯಿಂದ ಬೆಂಗಳೂರಿಗೆ ರಾತ್ರಿ ವಿಮಾನ ಸೇವೆ ಶುರು

Advertisement

Udayavani is now on Telegram. Click here to join our channel and stay updated with the latest news.

Next