Advertisement
ಇದರೊಂದಿಗೆ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಮೊದಲಾದ ಯೋಜನೆಗಳ ಫಲಾನುಭವಿಗಳನ್ನೂ ಸಹ ಗೃಹಜ್ಯೋತಿ ಯೋಜನೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸಲಾಗಿದೆ. ಅಲ್ಲದೆ, 48 ಯುನಿಟ್ ಒಳಗಿನ ಸರಾಸರಿ ಬಳಕೆಗೆ ಶೇ.10ರಷ್ಟು ಹೆಚ್ಚುವರಿ ವಿದ್ಯುತ್ ಬದಲಿಗೆ 10 ಯುನಿಟ್‌ಗಳಷ್ಟು ಹೆಚ್ಚುವರಿ ವಿದ್ಯುತ್ ಒದಗಿಸಲು ತೀರ್ಮಾನಿಸಲಾಗಿದೆ. ಅಲ್ಲದೆ ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು PM-KUSUM Component-B ಯೋಜನೆಯಡಿ 1,174 ಕೋಟಿ ರೂ. ಅಂದಾಜು ವೆಚ್ಚದಲ್ಲಿ 40,000 ಜಾಲ ಮುಕ್ತ (Off Grid) ಸೋಲಾರ್ ಪಂಪ್ ಸೆಟ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.30ರಷ್ಟಿದ್ದು, ರಾಜ್ಯ ಸರ್ಕಾರದ ವತಿಯಿಂದ ನೀಡುವ ಸಹಾಯಧನವನ್ನು ಶೇ.30ರಿಂದ ಶೇ.50ಕ್ಕೆ ಹೆಚ್ಚಿಸಲಾಗಿದೆ ಎಂದರು.
Related Articles
Advertisement
ನವೀಕರಿಸಬಹುದಾದ ಇಂಧನವನ್ನು ಬೃಹತ್ ಪ್ರಮಾಣದಲ್ಲಿ ಉತ್ಪಾದಿಸಿ ಬೇಡಿಕೆ ಹೆಚ್ಚಿರುವ ಕೇಂದ್ರಗಳು ಮತ್ತು ಗ್ರೀನ್ ಹೈಡೋಜನ್ ಹಬ್ ಗಳಿಗೆ ರವಾನಿಸಲು 765 kV ಯ Ultra High Voltage (UHV) ಟ್ರಾನ್ಸ್‌ಮಿಷನ್ ಮಾರ್ಗಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದರು.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಹುಮಹಡಿ ಕಟ್ಟಡಗಳ ಬೆಳವಣಿಗೆಯಿಂದಾಗಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ನೀಗಿಸಲು, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸಬ್‌ಸ್ಟೇಷನ್‌ಗಳನ್ನು ಉನ್ನತೀಕರಿಸಲಾಗುವುದು.
ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡಲು 2,500 EV Charging ಕೇಂದ್ರಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ಅಲ್ಲದೇ, ವಿದ್ಯುತ್ ಸರಬರಾಜು ಕಂಪನಿಗಳ ಮೂಲಕ 35 ಕೋಟಿ ರೂ. ವೆಚ್ಚದಲ್ಲಿ 100 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂಓದಿ: Budget 2024: ಪ್ರವಾಸೋದ್ಯಮಕ್ಕೆ ಒತ್ತು- ಕೊಪ್ಪಳದ ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ.