ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್ ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೇರಿದಂತೆ ಕೆಲವು ಯೋಜನೆ ಘೋಷಿಸಿದ್ದಾರೆ.
ಇದನ್ನೂ ಓದಿ:Karnataka Budget: ದಕ್ಷಿಣ ಕನ್ನಡದಲ್ಲಿ ಮೊದಲ ಜಲಮೆಟ್ರೋ, ಕರಾವಳಿಗೆ ಸಿಕ್ಕಿದ್ದೇನು?
ರಾಷ್ಟ್ರಪಿತ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಈ ವರ್ಷ ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿದೆ. ಮಹಾತ್ಮಾ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿದೆ. ಈ ಅಧಿವೇಶನದ ಕೊಡುಗೆಯನನು ಸ್ಮರಿಸಲು 2 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ. ಅಲ್ಲದೇ ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮರಣಾರ್ಥ ಫಲಕಗಳ ಅಳವಡಿಕೆ.
ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯಗಳನ್ನು ಪ್ರಾರಂಭಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.
ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ “ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ” ಸ್ಥಾಪಿಸಿ, ಪ್ರತಿ ವರ್ಷ ನೀಡಲಾಗುವುದು.