Advertisement

ಜನವರಿ 25 ಮಾತ್ರವಲ್ಲ ಫೆಬ್ರವರಿ 4 ಕ್ಕೂ ಬಂದ್‌ !

03:17 PM Jan 21, 2018 | |

ಹುಬ್ಬಳ್ಳಿ: ಮಹದಾಯಿ ನದಿ ನೀರಿನ ಹಂಚಿಕೆ ವಿವಾದ ಬಗೆ ಹರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ  ಫೆಬ್ರವರಿ 4 ರಂದು ಪ್ರಧಾನಿ  ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಇನ್ನೊಂದು ಬಂದ್‌ ನಡೆಸಲು ತೀರ್ಮಾನಿಸಲಾಗಿದೆ. 

Advertisement

ಹುಬ್ಬಳ್ಳಿಯಲ್ಲಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀವ್ರ ಚರ್ಚೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್‌ ಅವರು ‘ಪ್ರಧಾನಿ ಅವರು ಮಹದಾಯಿ ವಿಚಾರ ಬಗೆಹರಿಸಿ ಕರ್ನಾಟಕಕ್ಕೆ ನ್ಯಾಯ ಒದಗಿಸಿಕೊಟ್ಟರೆ ಫೆಬ್ರವರಿ 4 ರಂದು ನಾವು ಬಂದ್‌ ಮಾಡುವುದಿಲ್ಲ . ಇಲ್ಲವಾದಲ್ಲಿ ನಾವು ಜೈಲಿಗೆ ಹೋಗಲು ಸಿದ್ದ. ಉತ್ತರ ಕರ್ನಾಟಕದ ಸಾವಿರಾರು ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ’ಎಂದರು.

Advertisement

Udayavani is now on Telegram. Click here to join our channel and stay updated with the latest news.

Next