Advertisement

ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಓಡಾಟ, ಪ್ರಯಾಣಿಕರ ಪರದಾಟ

07:52 AM Apr 07, 2021 | Team Udayavani |

ಬೆಂಗಳೂರು: ಆರನೇ ವೇತನ ಆಯೋಗ ಶಿಫಾರಸಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಮುಷ್ಕರ ಹೂಡಿದ್ದು, ಯಾವುದೇ ಕೆಎಸ್ಆರ್ ಟಿಸಿ, ಬಿಎಂಟಿಸಿ ಬಸ್ ಗಳು ರಸ್ತೆಗಿಳಿದಿಲ್ಲ. ಬಸ್ ಬಂದ್ ಕಾರಣ ಪ್ರಯಾಣಿಕರು ಪರದಾಡುತ್ತಿದ್ದು, ಹಲವೆಡೆ ಖಾಸಗಿ ಬಸ್ ಗಳು ಓಡಾಟ ನಡೆಸುತ್ತಿವೆ.

Advertisement

ಬೆಂಗಳುರು, ಕೊಪ್ಪಳ, ತುಮಕೂರು, ಹಾವೇರಿ, ಮಂಡ್ಯ, ಬಾಗಲಕೋಟೆ, ಚಿತ್ರದುರ್ಗ, ರಾಮನಗರ, ನೆಲಮಂಗಲ, ಯಾದಗಿರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಎಸ್ ಆರ್ ಟಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದ ಕಾರಣ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಆಗಿದೆ.

ಸಾರಿಗೆ ನೌಕರರು ಮುಷ್ಕರ ನಡೆಸಿದರೆ ಎಸ್ಮಾದಂಥ ಕಠಿನ ಕ್ರಮ ಕೈಗೊಳ್ಳಲು ಸರಕಾರ ನಿರ್ಧರಿಸಿದೆ. ಸಿಎಂ ನೇತೃತ್ವದಲ್ಲಿ ನಡೆದ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಾರಿಗೆ ನೌಕರರ ಜತೆ ಸಂಧಾನ ಮಾಡಬೇಡಿ ಎಂದು ಸಿಎಂ ಬಿಎಸ್ ವೈ ಸ್ಪಷ್ಟ ಸೂಚನೆ ನೀಡಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಕರಾವಳಿಯಲ್ಲಿ ಹೆಚ್ಚಿನ ಪರಿಣಾಮ ಉಂಟು ಮಾಡಿಲ್ಲ. ಮಂಗಳೂರು, ಉಡುಪಿ ಸೇರಿದಂತೆ ನಗರ ಭಾಗಗಳಲ್ಲಿ ಖಾಸಗಿ ಬಸ್‌ ಸಂಚಾರ ಸಾಕಷ್ಟು ಪ್ರಮಾಣದಲ್ಲಿರುವ ಕಾರಣ ಪ್ರಯಾಣಿಕರ ಓಡಾಟ ಎಂದಿನಂತಿದೆ.

Advertisement

Udayavani is now on Telegram. Click here to join our channel and stay updated with the latest news.

Next