ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಶುಕ್ರವಾರ (ಫೆ.26) ದಂದು ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಿಗೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಮಾರ್ಚ್ 27ರಿಂದ ಏ.29ರವರೆಗೆ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಆದರೆ ಬಹು ನಿರೀಕ್ಷಿತ ರಾಜ್ಯದ ಉಪಚುನಾವಣೆಯ ದಿನಾಂಕ ಮಾತ್ರ ನಿಗದಿಯಾಗಿಲ್ಲ.
ವಿಜಯಪುರ ಜಿಲ್ಲೆಯ ಸಿಂದಗಿ, ಬೀದರ್ ಜಿಲ್ಲೆಯ ಬಸವ ಕಲ್ಯಾಣ, ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ಇದರೊಂದಿಗೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಬೇಕಿದೆ.
ಇದನ್ನೂ ಓದಿ:ಕೇಸರಿ ಪಾಳಯಕ್ಕೆ ಸತ್ವ ಪರೀಕ್ಷೆ
ಆದರೆ ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಸುನಿಲ್ ಅರೋರಾ ಅವರು ಉಪಚುನಾವಣೆಯ ದಿನಾಂಕ ನಿಗದಿಪಡಿಸಿಲ್ಲ. ಆದರೆ ಕರ್ನಾಟಕ ಹಾಗೂ ಇತರೆ ರಾಜ್ಯಗಳ ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದಿದ್ದಾರೆ.
ಮಾರ್ಚ್ 27ರಿಂದ ಮೇ 2 ರೊಳಗೆ ಕರ್ನಾಟಕ, ಆಂಧ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ 18ಕ್ಕೂ ಅಧಿಕ ಉಪ ಚುನಾವಣೆ ಪ್ರಕ್ರಿಯೆ ಮುಗಿಸಬೇಕಿದೆ. ಎಲ್ಲಾ ವಿಧಾನಸಭೆ, ಲೋಕಸಭೆ ಉಪ ಚುನಾವಣೆಗಳ ಫಲಿತಾಂಶವೂ ಮೇ 2ರಂದೇ ಪ್ರಕಟವಾಗಲಿದೆ ಎಂದಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳ ನಡುವೆ ಗುದ್ದಾಟ ಹೊಸದೆನ್ನಲ್ಲ : ಡಿಸಿಎಂ ಗೋವಿಂದ ಕಾರಜೋಳ