Advertisement

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

10:17 AM Nov 23, 2024 | Team Udayavani |

ಚನ್ನಪಟ್ಟಣ/ಶಿಗ್ಗಾಂವಿ: ರಾಜ್ಯದ ಜನತೆಯನ್ನು ಕುತೂಹಲದತ್ತ ತಳ್ಳಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತಎಣಿಕೆ ಶನಿವಾರ (ನ.23) ಬೆಳಗ್ಗೆ ಆರಂಭಗೊಂಡಿದ್ದು, ಈವರೆಗಿನ ಟ್ರೆಂಡ್‌ ಪ್ರಕಾರ ಶಿಗ್ಗಾಂವಿ , ಸಂಡೂರು ಮತ್ತು ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಲ್ಪಮತಗಳ ಮುನ್ನಡೆ ಕಾಯ್ದುಕೊಂಡಿದ್ದು, ಫಲಿತಾಂಶದ ಹಾವು-ಏಣಿ ಆಟ ಮುಂದುವರಿದಿದೆ.

Advertisement

ಸಂಡೂರಿನಲ್ಲಿ 1108 ಮತಗಳ ಅಂತರದಿಂದ ಕಾಂಗ್ರೆಸ್‌ ನ ಅನ್ನಪೂರ್ಣ ತುಕಾರಾಂ ಮುನ್ನಡೆ ಸಾಧಿಸಿದ್ದು, ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ನ ಸಿಪಿ ಯೋಗೇಶ್ವರ್‌ 3,233 ಮತಗಳ ಮುನ್ನಡೆ ಸಾಧಿಸಿದ್ದಾರೆ. ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಸತತ ಆರು ಸುತ್ತುಗಳಲ್ಲಿ ಮುನ್ನಡೆ ಸಾಧಿಸಿದ್ದರು.

ಚನ್ನಪಟ್ಟಣದಲ್ಲೂ ಜೆಡಿಎಸ್‌ ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ನಿಖಿಲ್‌ ಕುಮಾರಸ್ವಾಮಿ ಆರು ಸುತ್ತುಗಳಲ್ಲಿ ಮುನ್ನಡೆ ಸಾಧಿಸಿದ್ದರು. ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್‌ 998 ಮತಗಳ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಯಾಸಿರ್‌ ಖಾನ್‌ ಪಠಾಣ್‌ ಹಿನ್ನಡೆ ಅನುಭವಿಸಿದ್ದಾರೆ. ಈಗಿನ ಟ್ರೆಂಡ್‌ ಮಾಹಿತಿ ಪ್ರಕಾರ ಶಿಗ್ಗಾಂವಿಯಲ್ಲಿ ಪಠಾಣ್‌ 1,158 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್‌ 37,587 ಮತ ಪಡೆದಿದ್ದು, ಎನ್‌ ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ 33,628 ಮತ ಪಡೆದಿದ್ದಾರೆ.

ಸಂಡೂರಿನಲ್ಲಿ ಬಂಗಾರು ಹನುಮಂತು 43,555 ಮತ ಪಡೆದಿದ್ದು, ಅನ್ನಪೂರ್ಣ ತುಕಾರಾಂ 44,450 ಮತ ಪಡೆದಿದ್ದಾರೆ. ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್‌ ಬೊಮ್ಮಾಯಿ 38,607 ಮತ ಪಡೆದಿದ್ದು, ಕಾಂಗ್ರೆಸ್‌ ನ ಯಾಸಿರ್‌ ಪಠಾಣ್‌  37,609 ಮತ ಪಡೆದಿದ್ದಾರೆ.

Advertisement

ಉಪ ಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲೂ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next