ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಮಹದೇವಪ್ರಸಾದ್ ನಿಧನದಿಂದ ತೆರವಾದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಹಾಗೂ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಮೂಲಕ ತೆರವಾದ ನಂಜನಗೂಡು ಕ್ಷೇತ್ರಕ್ಕೆ ಏಪ್ರಿಲ್ 9ರಂದು ಉಪಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗ ಗುರುವಾರ 2 ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ಘೋಷಿಸಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಏ.13ರಂದು ಫಲಿತಾಂಶ ಪ್ರಕಟವಾಗಲಿದೆ.
ತೀವ್ರ ಹೃದಯಾಘಾತದಿಂದ ಸಚಿವ ಮಹದೇವಪ್ರಸಾದ್ ಅವರು ಇತ್ತೀಚೆಗೆ ನಿಧನ ಹೊಂದಿದ್ದರು. ನಂಜನಗೂಡು ಕ್ಷೇತ್ರದ ಶ್ರೀನಿವಾಸ್ ಪ್ರಸಾದ್ ಅಸಮಾಧಾನದಿಂದ ಕಾಂಗ್ರೆಸ್ ಪಕ್ಷ ತೊರೆದಿದ್ದರು. ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಮತ್ತು ನಂಜನಗೂಡು ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವಂತಾಗಿದೆ.
ಮಾರ್ಚ್ 14ರಂದು ನಾಮಪತ್ರ ಸಲ್ಲಿಕೆ ಆರಂಭ
ಮಾರ್ಚ್ 22ರಂದು ನಾಮಪತ್ರ ಪರಿಶೀಲನೆ
ಮಾರ್ಚ್ 24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ
ಏಪ್ರಿಲ್ 9ರಂದು ಮತದಾನ
ಏಪ್ರಿಲ್ 13ರಂದು ಫಲಿತಾಂಶ ಪ್ರಕಟ