Advertisement

ನಾಳೆಯೇ ಸಚಿವ ಸಂಪುಟ ವಿಸ್ತರಣೆ; ಇಬ್ಬರು ಹಾಲಿ ಸಚಿವರಿಗೆ ಕೊಕ್?

08:40 PM Dec 21, 2018 | Sharanya Alva |

ನವದೆಹಲಿ: ಸಚಿವ ಸಂಪುಟ ವಿಸ್ತರಣೆಯ ಕಸರತ್ತು ನವದೆಹಲಿಯಲ್ಲಿ ಮುಂದುವರಿದಿದ್ದು, ಇಬ್ಬರು ಹಾಲಿ ಸಚಿವರಿಗೆ ಕೊಕ್ ಕೊಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

Advertisement

ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಪರಮೇಶ್ವರ್, ಈಶ್ವರ್ ಖಂಡ್ರೆ, ಡಿಕೆ ಶಿವಕುಮಾರ್, ಕೆಸಿ ವೇಣುಗೋಪಾಲ್ ಜತೆ ಶನಿವಾರ ಕಾಂಗ್ರೆಸ್  ವರಿಷ್ಠ ರಾಹುಲ್ ಗಾಂಧಿ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.

ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿಯ ತುಘಲಖ್ ಲೇನ್ ನಲ್ಲಿರುವ ರಾಹುಲ್ ಗಾಂಧಿ ನಿವಾಸದಲ್ಲಿ ನಡೆದಿರುವ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ದೀರ್ಘ ಸಮಾಲೋಚನೆ ನಡೆಸಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್ ಸೇರಿದಂತೆ ಎಂಟು ಶಾಸಕರಿಗೆ ಸ್ಥಾನ ನೀಡಲು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next