Advertisement

ರಾಜ್ಯಕ್ಕೆ ಒಳ್ಳೆಯ ದಿನ ಬರಲಿದೆ: ಆಂಜನೇಯ ಸ್ವಾಮಿ ಪುತ್ಥಳಿ ಅನಾವರಣಗೊಳಿಸಿ ಸಿಎಂ

05:06 PM Apr 10, 2022 | Team Udayavani |

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಬಿದನಗೆರೆಯಲ್ಲಿ ಬಿದನಗೆರೆ ಬಸವೇಶ್ವರ ಮಠದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿಯ ಪುತ್ಥಳಿಯನ್ನು ಭಾನುವಾರ ಅನಾವರಣಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಕ್ಕೆ ಒಳ್ಳೆಯ ದಿನ ಬರಲಿದೆ ಎಂದು ಹೇಳಿದ್ದಾರೆ.

Advertisement

ಈ ಪ್ರದೇಶದಲ್ಲಿ ರಾಮ ನವಮಿಯ ಶುಭ ಸಂದರ್ಭದಲ್ಲಿ ಅನೇಕ ಪವಿತ್ರ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಪ್ರದೇಶವು ದೊಡ್ಡ ಬೆಳವಣಿಗೆಗಳನ್ನು ಕಾಣಲಿದೆ ಎಂದು ಬೊಮ್ಮಾಯಿ ಹೇಳಿದರು.

“ಪಂಚಮುಖಿ ಆಂಜನೇಯ ಹನುಮಂತನ ವಿಶೇಷ ರೂಪವಾಗಿದ್ದು, ರಾಮಾಯಣದಲ್ಲಿ ಉಲ್ಲೇಖವಿದೆ. ಹನುಮಂತನು ಲೋಕಕಲ್ಯಾಣಕ್ಕಾಗಿ ಈ ರೂಪವನ್ನು ಪಡೆದನು. ಹನುಮಂತನ 161 ಅಡಿ ಎತ್ತರದ ಪ್ರತಿಮೆಯನ್ನು ಕರ್ನಾಟಕದಲ್ಲಿ ಪ್ರತಿಷ್ಠಾಪಿಸಬೇಕೆಂಬುದು ಅವರ ದಿವ್ಯ ಆಶಯವಾಗಿದೆ. ಶಿಲ್ಪಿಗಳು ಅದ್ಭುತವಾಗಿ ಕೆಲಸ ಮಾಡಿದ್ದಾರೆ’ ಎಂದು ಬೊಮ್ಮಾಯಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next