Advertisement

ಜನತಾ ದರ್ಶನದಲ್ಲಿ ಜನಜಂಗುಳಿ

06:25 AM Jun 12, 2018 | Team Udayavani |

ಬೆಂಗಳೂರು: ಮುಖ್ಯಮಂತ್ರಿಯವರ ಜನತಾ ದರ್ಶನದಲ್ಲಿ ಸೋಮವಾರ ಜನಜಂಗುಳಿಯೇ ಇತ್ತು. ಬೆಳಗ್ಗೆಯಿಂದ ಸಂಜೆವರೆಗೆ ಕಾದ ಸಾರ್ವಜನಿಕರು ನಾಡಿನ ದೊರೆಯ ಮುಂದೆ ತಮ್ಮ ಅಹವಾಲುಗಳನ್ನು ತೋಡಿಕೊಂಡರು. ಸೋಮವಾರದ ಜನತಾ ದರ್ಶನದಲ್ಲಿ 350ಕ್ಕೂ ಹೆಚ್ಚು ಜನರು ತಮ್ಮ ವಿವಿಧ ಬೇಡಿಕೆಗಳ ಮನವಿಯನ್ನು
ಮುಖ್ಯಮಂತ್ರಿಯವರಿಗೆ ಸಲ್ಲಿಸಿದರು. 

Advertisement

ಇದೇ ವೇಳೆ ನೇಮಕಾತಿ ಪಟ್ಟಿ ಬಿಡುಗಡೆ ಮಾಡಿ ಎಂದು 100ಕ್ಕೂ ಹೆಚ್ಚು ಕಿರಿಯ ಮಹಿಳಾ ಆರೋಗ್ಯ ಸಹಾಯಕಿರು ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಇಂಗ್ಲಿಷ್‌, ಗಣಿತ ಶಿಕ್ಷಕರ ನೇಮಕಾತಿಗೆ ನಿಗದಿಪಡಿಸಿರುವ ಅಂಕಗಳನ್ನು ಕಡಿತಗೊಳಿಸಬೇಕು ಎಂದು ಹೈದರಾಬಾದ್‌ ಕರ್ನಾಟಕದ 50ಕ್ಕೂ ಹೆಚ್ಚುಅಭ್ಯರ್ಥಿಗಳು ಮನವಿ ಸಲ್ಲಿಸಿದರು. ಬೆಳಗ್ಗೆ 10 ಗಂಟೆಗೆ ಜನತಾ ದರ್ಶನ ನಿಗದಿಯಾಗಿತ್ತು. ಆದರೆ, ಮುಖ್ಯಮಂತ್ರಿ ಬಂದಿದ್ದು ಮಧ್ಯಾಹ್ನ 3 ಗಂಟೆ ವೇಳೆಗೆ. ಎಲ್ಲರ ಅಹವಾಲುಗಳನ್ನು ಸಮಧಾನದಿಂದ ಆಲಿಸಿದ ಮುಖ್ಯಮಂತ್ರಿಗಳು ಕೆಲವು ಮನವಿಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆಗಳನ್ನು ನೀಡಿದರು.

ಬಜೆಟ್‌ ಮಂಡನೆವರೆಗೆ ಜನತಾ ದರ್ಶನ ಇಲ್ಲ: ಬಜೆಟ್‌ ಸಿದ್ಧತೆ ಮಾಡಬೇಕಾಗಿರುವುದರಿಂದ ಸಿಎಂ ಕುಮಾರಸ್ವಾಮಿ ಅವರು ಬಜೆಟ್‌ ಮಂಡನೆವರೆಗೆ ಜನತಾ ದರ್ಶನ ಸ್ಥಗಿತಗೊಳಿಸಿದ್ದಾರೆ. ಈ ಕುರಿತು ಸಿಎಂ ಕಚೇರಿ ಪ್ರಕಟಣೆ ಹೊರಡಿಸಿದ್ದು, ಬಜೆಟ್‌ ಅಧಿವೇಶನ ಮುಕ್ತಾಯಗೊಳ್ಳುವವರೆಗೆ ಜನತಾ ದರ್ಶನ ಮತ್ತು ಸಾರ್ವಜನಿಕರ
ಭೇಟಿಯನ್ನು ಮುಂದೂಡಲಾಗಿದೆ ಎಂದು ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next