ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ನೀಡುವ ಕರ್ನಾಟಕ ಚೂಡಾಮಣಿ’ ಪ್ರಶಸ್ತಿಯನ್ನು ಶುಕ್ರವಾರ ಪ್ರಕಟಿಸಲಾಗಿದೆ. ಬೆಳಗಾವಿಯ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.
ಪ್ರಶಸ್ತಿ 10 ಸಾವಿರ ರೂ.ನಗದು ಮತ್ತು ಸನ್ಮಾನ ಒಳಗೊಂಡಿದೆ. ಶೀಘ್ರದಲ್ಲೆ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ರಾಜ್ಯಾಧ್ಯಕ್ಷ ವ.ಚ.ಚನ್ನೇಗೌಡ ತಿಳಿಸಿದ್ದಾರೆ. 2007ನೇ ಸಾಲಿನಿಂದ ಕನ್ನಡ ನಾಡು, ನುಡಿಗಾಗಿ ಹೋರಾಟ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಸಮಿತಿ ಗೌರವಿಸುತ್ತಾ ಬಂದಿದೆ. ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಪ್ರಶಸ್ತಿ ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ.