Advertisement

ಇಂದು ಫಲಾನುಭವಿಗಳ ಸಮ್ಮೇಳನ: ಸಿಎಂ ಉದ್ಘಾಟನೆ

11:56 PM Mar 15, 2023 | Team Udayavani |

ಮಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಮಾ.16ರಂದು ಬೆಳಗ್ಗೆ 10ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್‌, ಸಚಿವರಾದ ಎಸ್‌. ಅಂಗಾರ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಶಾಸಕ ಡಿ. ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್‌ ಕುಮಾರ್‌ ಕಟೀಲು ಸಹಿತ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಬಸ್‌ ಸೇವೆಯಲ್ಲಿ ವ್ಯತ್ಯಯ
ಸಮಾವೇಶದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಮಂಗಳೂರು/ಸ್ಟೇಟ್‌ಬ್ಯಾಂಕ್‌ನಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ಮಾರ್ಗದ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವ ಕಾರಣ, ಆ ವೇಳೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next