Advertisement

ಜನತಾ ಕರ್ಫ್ಯೂ ಬೆಂಬಲಿಸಲು ಸಿಎಂ ಮನವಿ

11:14 AM Mar 22, 2020 | Sriram |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವಂತೆ ರವಿವಾರದ ಜನತಾ ಕರ್ಫ್ಯೂ ಆಚರಣೆಯನ್ನು ಬೆಂಬಲಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.

Advertisement

ಜನತಾ ಕರ್ಫ್ಯೂ ಆಚರಣೆಗೆ ನಿಮ್ಮೆಲ್ಲರ ಬೆಂಬಲ ಅತಿ ಅಗತ್ಯವಾಗಿದೆ. ರವಿವಾರ ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆವರೆಗೆ ನಾವೆಲ್ಲರೂ ಮನೆಯಲ್ಲಿ ಉಳಿದು ನಿಜವಾದ ಅರ್ಥದಲ್ಲಿ ಕರ್ಫ್ಯೂ ಬೆಂಬಲಿಸೋಣ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯವು ದೇಶದಲ್ಲಿ ಕೊವಿಡ್‌-19 ವೈರಾಣು ಹರಡುವಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದೆಲ್ಲದಕ್ಕೂ ರಾಜ್ಯದ 6.5 ಕೋಟಿ ಜನರ ನೈತಿಕ ಮತ್ತು ಸಾಂ ಕ ಬೆಂಬಲ ಕಾರಣ. ಈ ಸಮಯದಲ್ಲಿ ನನ್ನ ಕಳಕಳಿಯ ಮನವಿ ಎಂದರೆ ರವಿವಾರ ರಾತ್ರಿ 9 ಗಂಟೆಯ ಅನಂತರ ಕರ್ಫ್ಯೂ ಅವಧಿ ಮುಗಿದಿದೆ ಎಂದು ಎಲ್ಲರೂ ಮನೆಯ ಹೊರಗಡೆ ಬಂದು ಸಂಭ್ರಮಿಸುವುದಾಗಲೀ ಅಥವಾ ನಿಮ್ಮ ನಿತ್ಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಾಗಲೀ ಮಾಡಬೇಡಿ.

ಇದು ಬೆಳಗ್ಗೆಯಿಂದ ಆಚರಿಸುವ ರೋಗ ತಡೆಯುವ ಕ್ರಮವಾದ ಕರ್ಫ್ಯೂವನ್ನು ಅರ್ಥರಹಿತವಾಗಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ನಿಮಗೆ 9 ಗಂಟೆಯ ಬಳಿಕ ಮನೆಯ ಹೊರಗಡೆ ಬರದ ಮನೆಯವರೆಲ್ಲರೂ ಆಪ್ತರೊಂದಿಗೆ ಕಾಲ ಕಳೆಯಲು ಮನವಿ ಮಾಡಿರುತ್ತಾರೆ. ಆವಾಗ ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆಯ ಕರ್ಫ್ಯೂಗೆ ಒಂದು ಅರ್ಥ ಬರುತ್ತದೆ ಮತ್ತು ಸಾರ್ಥಕವಾಗಲಿದೆ. ಸಂಜೆ 5 ಗಂಟೆಗೆ ನಿಮ್ಮ ಮನೆಯ ಕಿಟಕಿಗಳಿಂದ ಮತ್ತು ಛಾವಣಿಗಳ ಮೇಲಿಂದ ಚಪ್ಪಾಳೆ ತಟ್ಟಿ ಸರಕಾರದ ಮತ್ತು ರೋಗ ತಡೆಯುವಲ್ಲಿ ಭಾಗಿಯಾಗಿರುವ ಜನರಿಗೆ ನೈತಿಕ ಬೆಂಬಲ ಸೂಚಿಸಲು ಮಾತ್ರ ಮರೆಯಬೇಡಿ ಎಂದವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next