Advertisement

ಬಂಜಾರ ಸಮುದಾಯ ಮುಖ್ಯವಾಹಿನಿಗೆ ತರಲು ಅಗತ್ಯ ನೆರವು :  ಬೊಮ್ಮಾಯಿ

06:50 PM Feb 15, 2022 | Team Udayavani |

ಬೆಂಗಳೂರು : ಬಂಜಾರ ಸಮುದಾಯ ಒಗ್ಗಟ್ಟಿನಿಂದ ಸಮಾಜದ ಮುಖ್ಯವಾಹಿನಿಗೆ ಬರಲು ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಸಂತ ಸೇವಾಲಾಲರ ಜಯಂತಿಯ ಅಂಗವಾಗಿ ಅವರು ಇಂದು ತಮ್ಮ ನಿವಾಸದಲ್ಲಿ ಸಂತ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದರು.

ಸಂತ ಸೇವಾಲಾಲರ ಜಯಂತಿ ಅರ್ಥಪೂರ್ಣ ವಾಗಿ ಆಚರಿಸಬೇಕೆಂಬ ಆಶಯ ನಮ್ಮದು. ಲಂಬಾಣಿ, ಬಂಜಾರ ಸಮುದಾಯಕ್ಕೆ ದೊಡ್ಡ ಪರಂಪರೆ ಇದೆ. ತನ್ನದೇ ವೈಶಿಷ್ಟ್ಯವನ್ನು ಹೊಂದಿರುವ ಸಮಾಜ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಇರುವ ಕೆಲವೇ ಕೆಲವು ಸಮುದಾಯಗಳಲ್ಲಿ ಬಂಜಾರ ಸಮುದಾಯವೂ ಒಂದು. ಸಮುದಾಯದ ಯುವಕರು ವಿದ್ಯಾವಂತರು ಹಾಗೂ ಬುದ್ಧಿವಂತರು ಆಗಲು ಹಾಗೂ ಸಮುದಾಯದ ಸಮಗ್ರ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರು ತಾಂಡ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ತಾಂಡದವರಿಗೆ ಆರ್ಥಿಕ ನೆರವು ನೀಡಲು ವಿವಿಧ ಯೋಜನೆಗಳಿಗೆ ಈ ಬಾರಿಯ ಬಜೆಟ್ ನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದರು.

ಶ್ರಮಜೀವಿಗಳು

ಬಂಜಾರ ಸಮುದಾಯದವರು ಬಹಳ ಶ್ರಮಜೀವಿಗಳು ಕರ್ನಾಟಕದ ಪ್ರಗತಿ ಯಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮುದಾಯಕ್ಕೆ ಅಗತ್ಯ ನೆರವನ್ನು ನೀಡಲು ಕ್ರಮ ಜರುಗಿಸಲಾಗುವುದು ಎಂದರು.

Advertisement

ಇದನ್ನೂ ಓದಿ : ಕವಿ ಕಣವಿ ರಾಷ್ಟ್ರ ಕವಿಯಾಗುವುದಕ್ಕೆ ನನ್ನ ಸಹಮತವೂ ಇದೆ: ಪ್ರಹ್ಲಾದ್ ಜೋಶಿ

Advertisement

Udayavani is now on Telegram. Click here to join our channel and stay updated with the latest news.

Next