Advertisement
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಕವಚ ಯೋಜನೆಯಡಿ ನೂತನವಾಗಿ ಸೇರ್ಪಡೆಗೊಳಿಸಿರುವ 120 ಆ್ಯಂಬುಲೆನ್ಸ್‌ಗಳಿಗೆ ವಿಧಾನಸೌಧದ ಮುಂಭಾಗ ಹಸಿರು ನಿಶಾನೆ ತೋರಿದ ಅವರು, ಕರೆ ಬಂದ ಕೂಡಲೇ ನಿಗದಿತ ಸ್ಥಳಕ್ಕೆ ತೆರಳಿ ರೋಗಿ ಗಳನ್ನು ಆಸ್ಪತ್ರೆಗೆ ದಾಖಲಿಸಿ ಪ್ರಾಣ ಉಳಿಸಲು ಶ್ರಮಿಸಬೇಕು ಎಂದು ಆ್ಯಂಬುಲೆನ್ಸ್ ಚಾಲಕರಿಗೆ ಕರೆ ನೀಡಿದರು. 108 ಆ್ಯಂಬುಲೆನ್ಸ್ ಸೇವೆ ಗ್ರಾಮೀಣ ಭಾಗದಲ್ಲಿ ಬಹಳ ಉಪಯುಕ್ತವಾಗಿದೆ. ಆ್ಯಂಬುಲೆನ್ಸ್ ಆರೋಗ್ಯದ ಜೀವನಾಡಿಯಾಗಿದೆ ಎಂದು ಹೇಳಿದರು.
ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಮಾತನಾಡಿ, ಆರೋಗ್ಯ ಕವಚ ಯೋಜನೆಯಡಿ 710 ಆ್ಯಂಬುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಆ ಪೈಕಿ 155 ಅಡ್ವಾನ್ಸ್‌ಡ್ ಲೈಫ್ ಸಪೋರ್ಟ್ ವ್ಯವಸ್ಥೆ ಹೊಂದಿವೆ ಎಂದು ಹೇಳಿದರು. ಆ್ಯಂಬುಲೆನ್ಸ್ ಸೇವೆಯು ಆರೋಗ್ಯ ರಂಗದ ಪ್ರಮುಖ ಅಂಗವಾಗಿದ್ದು, ತುರ್ತು ಪರಿಸ್ಥಿತಿಗಳಲ್ಲಿ ಜೀವ ಉಳಿಸಲು ನಿರ್ಣಾಯಕ ಪಾತ್ರ ವಹಿಸುತ್ತವೆ. ಹೃದ್ರೋಗ, ಸ್ಟ್ರೋಕ್ ಮುಂತಾದ ಸಂದರ್ಭಗಳಲ್ಲಿ ಗೋಲ್ಡನ್ ಅವರ್ ಎಂದು ಕರೆಯಲ್ಪಡುವ ಸಮಯ ನಿರ್ಣಾಯಕವಾಗಿದ್ದು, ಇಂಥ ಸಂದರ್ಭಗಳಲ್ಲಿ ಆ್ಯಂಬುಲೆನ್ಸ್ ಜವಾಬ್ದಾರಿ ಅತಿ ಪ್ರಮುಖವಾಗಿದೆ ಎಂದು ಹೇಳಿದರು.
Related Articles
Advertisement
2008ರಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರ ಅವಧಿಯಲ್ಲಿ ಆರಂಭವಾದ ಆರೋಗ್ಯ ಕವಚ ಸೇವೆಗೆ ಆಧುನಿಕ ಸ್ಪರ್ಶ ನೀಡಲಾಗುವುದು. ಆಸ್ಪತ್ರೆಗಳ ಮ್ಯಾಪಿಂಗ್, ಜಿಪಿಎಸ್ ತಂತ್ರಜ್ಞಾನ ಅಳವಡಿಸಿಕೊಂಡರೆ ವ್ಯಕ್ತಿ ಕರೆ ಮಾಡಿದ 10-15 ನಿಮಿಷದಲ್ಲಿ ಆ್ಯಂಬುಲೆನ್ಸ್ ಸ್ಥಳಕ್ಕೆ ತಲುಪಲಿದೆ ಹಾಗೂ ಸಮೀಪದ ಆಸ್ಪತ್ರೆಯನ್ನು ಗುರುತಿಸಬಹುದು ಎಂದು ತಿಳಿಸಿದರು.
40- 50 ಸಾವಿರ ಜನರಿಗೆ ಒಂದು ಆ್ಯಂಬುಲೆನ್ಸ್ ಪ್ರಸ್ತುತ ನಗರ ಪ್ರದೇಶದಲ್ಲಿ 30 ರಿಂದ 45 ನಿಮಿಷ ಹಾಗೂ ಗ್ರಾಮೀಣ ಭಾಗದಲ್ಲಿ 45 ನಿಮಿಷಕ್ಕಿಂತ ಹೆಚ್ಚು ಸಮಯ ಬೇಕಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗವಾಗಿ ಸೇವೆ ದೊರಕುವಂತೆ ಸುಧಾರಣೆ ತರಲಾಗುವುದು. ಪ್ರಸ್ತುತ 1 ಲಕ್ಷ ಜನಸಂಖ್ಯೆಗೆ ಒಂದು ಆ್ಯಂಬುಲೆನ್ಸ್ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಅದನ್ನು 40ರಿಂದ 50 ಸಾವಿರ ಜನಸಂಖ್ಯೆಗೆ ಇಳಿಸಲಾಗುವುದು ಎಂದು ಹೇಳಿದರು. ಸಚಿವರಾದ ಶ್ರೀರಾಮುಲು, ಎಸ್.ಟಿ. ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. 5 ಕೋಟಿ ಲಸಿಕೆಯತ್ತ ರಾಜ್ಯ ದಾಪುಗಾಲು
ರಾಜ್ಯದಲ್ಲಿ ದಿನಕ್ಕೆ ಸರಾಸರಿ 3.8 ಲಕ್ಷ ಡೋಸ್ ಲಸಿಕೆ ನೀಡಲಾಗುತ್ತಿದ್ದು, ಇದು ಇಡೀ ರಷ್ಯಾ ದೇಶದಲ್ಲಿ ನೀಡುತ್ತಿರುವ ಲಸಿಕೆಗಿಂತ ಹೆಚ್ಚಾಗಿದೆ. ಕರ್ನಾಟಕ 5 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸುವತ್ತ ದಾಪುಗಾಲು ಇಡುತ್ತಿದೆ.
– ಡಾ| ಕೆ. ಸುಧಾಕರ್, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ