Advertisement

ಮೀಸಲಾತಿ ಹೆಚ್ಚಳಕ್ಕೆ ಅಪಸ್ವರ ಎತ್ತುವವರು ಎಸ್ಸಿ /ಎಸ್ಟಿ ವಿರೋಧಿಗಳು

11:22 PM Oct 11, 2022 | Team Udayavani |

ರಾಯಚೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಳಕ್ಕೆ ಸರಕಾರ ಕೈಗೊಂಡ ನಿರ್ಧಾರಕ್ಕೆ ಅಪಸ್ವರ ಎತ್ತುವವರೇ ಎಸ್‌ಟಿ, ಎಸ್‌ಟಿ ಸಮುದಾಯಗಳ ವಿರೋಧಿಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

Advertisement

ಗಿಲ್ಲೆಸುಗೂರಿನಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಷ್ಟು ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್‌ ನಾಯಕರು ತಮ್ಮ ಅಧಿಕಾರವಧಿಯಲ್ಲಿ ಏನು ಮಾಡದೇ ಈಗ ಮೀಸಲಾತಿ ಹೆಚ್ಚಳ ಕುರಿತು ಟೀಕಿಸುತ್ತಿದ್ದಾರೆ. ಮೀಸಲಾತಿ ಹೆಚ್ಚಳದಿಂದ ಬಿಜೆಪಿಗೆ ವೋಟು ಹೆಚ್ಚಲಿದೆ ಎನ್ನುವ ಆತಂಕ ಶುರುವಾಗಿದ್ದು, ಕಾಂಗ್ರೆಸ್‌ನಲ್ಲಿ ತಳಮಳ ಉಂಟಾಗಿದೆ ಎಂದರು.

ಬೇರೆ ಬೇರೆ ಸಮುದಾಯಗಳ ಮೀಸಲಾತಿ ಬೇಡಿಕೆ ಕುರಿತು ರಚಿಸಿರುವ ಆಯೋಗಗಳ ವರದಿ ಆಧರಿಸಿ ಕಾನೂನಿನಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.

2023ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಸರಕಾರದ ಸಾಧನೆಗಳನ್ನು ಜನರಿಗೆ ಪರಿಚಯಿಸಲು ಜನಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಸೋಲಿನ ಭೀತಿ ಎದುರಾಗಿದ್ದು, ಪಕ್ಷದ ನಾಯಕ ರಾಹುಲ್‌ ಗಾಂಧಿ ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಆತಂಕದಿಂದ ಭಾರತ ಜೋಡೋ ಪಾದಯಾತ್ರೆ ಆರಂಭಿಸಿದ್ದಾರೆ. ಕಾಂಗ್ರೆಸ್‌ ಪಾದಯಾತ್ರೆಗೂ ಬಿಜೆಪಿ ಜನಸಂಕಲ್ಪ ಯಾತ್ರೆಗೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಅವರು ಹೇಳಿದರು.

ರಾಯರ ಮಠಕ್ಕೆ ಬೊಮ್ಮಾಯಿ, ಬಿಎಸ್‌ವೈ ಭೇಟಿ
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಮಂಗಳವಾರ ಭೇಟಿ ನೀಡಿದರು. ರಾಯರ ಮೂಲ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಬಳಿಕ ಶ್ರೀಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರು ಗಣ್ಯರನ್ನು ಆಶೀರ್ವದಿಸಿದರು. ಸಚಿವರಾದ ಬಿ. ಶ್ರೀರಾಮುಲು, ಗೋವಿಂದ ಕಾರಜೋಳ ಸೇರಿದಂತೆ ಇತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next