Advertisement

NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

02:59 PM Nov 20, 2024 | |

ಬೆಂಗಳೂರು: ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (NABARD) ನಿಂದ ಈ ವರ್ಷ ರಾಜ್ಯಕ್ಕೆ ಸಾಲದ ಮೊತ್ತದಲ್ಲಿ ಕಡಿತವಾಗಿರುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಮಾತನಾಡಲು ಸಮಯಾವಕಾಶ ಕೇಳಿದ್ದಾರೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು(ಬುಧವಾರ, ನ20) ರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ‘ ಗುರುವಾರ ದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಬಿಡುಗಡೆ ಇದೆ, ಹಾಗಾಗಿ ನಾನು ಹೋಗುತ್ತಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನೂ ಭೇಟಿ ಮಾಡಲಿದ್ದೇನೆ ಈ ವರ್ಷ ರಾಜ್ಯಕ್ಕೆ ನಬಾರ್ಡ್ ಸಾಲವನ್ನು ಕಡಿಮೆ ಮಾಡಲಾಗಿದೆ. ಕಳೆದ ವರ್ಷ 5,600 ಕೋಟಿ ನೀಡಿದ್ದರೆ, ಈ ವರ್ಷ 2,340 ಕೋಟಿ ರೂ. 58 ರಷ್ಟು ಕಡಿಮೆಯಾಗಿದೆ. ನಬಾರ್ಡ್ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುತ್ತದೆ. ನಾನು ಅವರಿಗೆ ವಿನಂತಿಯನ್ನು ಮಾಡುತ್ತೇನೆ’ ಎಂದು ಹೇಳಿದ್ದಾರೆ.

ಭೇಟಿಯ ವೇಳೆ ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ “ನಾಳೆ ಸಂಜೆಯೊಳಗೆ ನಾನು ರಾಜ್ಯಕ್ಕೆ ಮರಳಬೇಕಾಗುತ್ತದೆ. ಸಮಯ ಸಿಕ್ಕರೆ ಭೇಟಿಯಾಗುತ್ತೇನೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next