Advertisement

Rahul Gandhi ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ: ಮಹತ್ವದ ಮಾತುಕತೆ

05:55 PM Aug 23, 2024 | Team Udayavani |

ಹೊಸದಿಲ್ಲಿ: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆಯ ಭೀತಿ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಆ23) ರಂದು ಕಾಂಗ್ರೆಸ್ ನಾಯಕ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

Advertisement

ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿಸಿಎಂ ಸಿದ್ದರಾಮಯ್ಯ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ ಅವರು ಜತೆಗಿದ್ದರು.

ಗುರುವಾರ ಸಂಜೆ ವಿಧಾನಸೌಧದಲ್ಲಿ ಕರೆದಿದ್ದ ಶಾಸಕಾಂಗ ಸಭೆಗೆ ಹಾಜರಾದ ಶಾಸಕರ ಸಮ್ಮುಖದಲ್ಲಿ ಸಿದ್ದರಾಮಯ್ಯ ತಮ್ಮ ವಿರುದ್ಧದ ಪ್ರಕರಣಗಳ ಬಗ್ಗೆ ಆತ್ಮನಿವೇದನೆ ಮಾಡಿಕೊಂಡಿದ್ದರು. ಮುಡಾ ನಿವೇಶನ ಹಂಚಿಕೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣಗಳ ಬಗ್ಗೆ ಸ್ಪಷ್ಟನೆಗಳನ್ನು ನೀಡಿ, ಎರಡೂ ಪ್ರಕರಣಗಳಲ್ಲಿ ತಮ್ಮದಾಗಲಿ, ಕುಟುಂಬದ್ದಾಗಲಿ, ಸರಕಾರದ್ದಾಗಲಿ ತಪ್ಪಿಲ್ಲ ಎಂಬುದನ್ನು ಪುನರುಚ್ಚರಿಸಿದರು.ಎಲ್ಲ ಶಾಸಕರು ಸರ್ವಾನುಮತದಿಂದ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದರು. ಆ ಬಳಿಕ ಮಹತ್ವದ ಭೇಟಿ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next