Advertisement

Karnataka: ಮತ್ತೊಮ್ಮೆ ಜೈ ಶ್ರೀರಾಮ್‌ ಘೋಷಣೆ ಕೂಗಿದ ಸಿಎಂ ಸಿದ್ದರಾಮಯ್ಯ

12:53 AM Jan 25, 2024 | Pranav MS |

ಪಿರಿಯಾಪಟ್ಟಣ: ಬಿಜೆಪಿಯವರು ರಾಮನನ್ನು ಸೀತೆಯಿಂದ ಬೇರ್ಪಡಿಸಿದ್ದು, ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಜ.22ರಂದು ಮಹದೇವಪುರದಲ್ಲಿ ಜೈಶ್ರೀರಾಮ್‌ ಎಂದು ಘೋಷಿಸಿದ್ದ ಸಿದ್ದರಾಮಯ್ಯ, ಬುಧವಾರ ಮತ್ತೂಮ್ಮೆ ಜೈಶ್ರೀರಾಮ್‌ ಎಂದರು. ಜನರಿಂದಲೂ ಕೂಗಿಸಿದರು. ಮೈಸೂರಿನ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದ  ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Advertisement

ಬಿಜೆಪಿಯವರು ಜನರನ್ನು ಮರಳು ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಲ್ಲಿ ಅಧಿಕಾರ ಹಿಡಿದು ಕುಳಿತಿದ್ದಾರೆ. ರಾಮ ಮಂದಿರ ಉದ್ಘಾಟಿಸಿದ್ದಾರೆ, ವ್ರತ ಮಾಡುತ್ತಾರಂತೆ. ನಾವು ರಾಮನ ಪೂಜೆ ಮಾಡುವುದಿಲ್ಲವೇ? ರಾಮನ ಭಜನೆ ಮಾಡುವುದಿಲ್ಲವೇ? ಧನುರ್ಮಾಸದಲ್ಲಿ ನಾನೂ ಬೆಳಗ್ಗೆ ಎದ್ದು ದೇವಸ್ಥಾನಕ್ಕೆ ಹೋಗಿ ರಾಮನ ಭಜನೆ ಹಾಡುತ್ತಿದ್ದೆ. ಮೊನ್ನೆ ಬೆಂಗಳೂರಿನಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದೆ. ಜೈ ಶ್ರೀರಾಮ್‌ ಅಂತ ಘೋಷಣೆ ಕೂಗಿಸಿದೆ. ನನ್ನ ಹೆಸರು ಸಿದ್ದರಾಮಯ್ಯ. ನನ್ನ ಹೆಸರಲ್ಲೇ ರಾಮ ಇದ್ದಾನೆ. ನಮ್ಮಪ್ಪನ ಹೆಸರು ಸಿದ್ದರಾಮೇಗೌಡ. ತಮ್ಮಂದಿರ ಹೆಸರು ರಾಮೇಗೌಡ, ಸಿದ್ದೇಗೌಡ, ಸಿದ್ದರಾಮೇಗೌಡ. ನಾವ್ಯಾರೂ ಹಿಂದೂಗಳಲ್ಲವೇ? ಬಿಜೆಪಿಯವರು ಭಾವನೆಗಳ ಮೇಲೆ ಮತ ಕೇಳುತ್ತಾರೆ. ಅವರನ್ನು ನೀವು ನಂಬಬೇಡಿ ಎಂದು ಹೇಳಿದರು.

ರಾಮನನ್ನು ಮಾತ್ರ ಉಳಿಸಿಕೊಂಡಿದ್ದಾರೆ: ನಾವು ಮಹಾತ್ಮ ಗಾಂಧಿ ಹೇಳುವ ರಾಮನ ಮೇಲೆ ನಂಬಿಕೆ ಇಟ್ಟಿದ್ದೇವೆ. ರಘುಪತಿ ರಾಘವ ರಾಜಾರಾಮ, ಪತಿತ ಪಾವನ ಸೀತಾರಾಮ್‌ ಎಂದು ಅವರು ಹೇಳಿದ್ದಾರೆ. ನಾವು ಪೂಜಿಸುವ ರಾಮನ ಜತೆಗೆ ಸೀತೆ, ಲಕ್ಷ್ಮಣ, ಹನುಮಂತ ಇರುತ್ತಾರೆ. ಅದಕ್ಕೆ ನಾವು ಸೀತಾರಾಮ ಅಂತ ಕರೆಯುತ್ತೇವೆ. ಬಿಜೆಪಿಯವರು ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದ್ದರಿಂದಲೇ ಸೀತೆ, ಲಕ್ಷ್ಮಣ, ಹನುಮಂತನನ್ನು ಬೇರ್ಪಡಿಸಿದ್ದಾರೆ ಎಂದರು.

ವೈಫ‌ಲ್ಯ ಮುಚ್ಚಿಕೊಳ್ಳಲು ಶ್ರೀರಾಮನ ತಂದರು

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅದರಲ್ಲಿ ವಿಫ‌ಲರಾದರು. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆಗಲಿಲ್ಲ. ಈ ವೈಫ‌ಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ. ಮೋದಿಯವರು ನುಡಿದಂತೆ ನಡೆಯಲು ಸಾಧ್ಯವಾಗಿಲ್ಲ. ಪೆಟ್ರೋಲ್‌, ಡೀಸೆಲ, ಗೊಬ್ಬರದ ಬೆಲೆ ಬಗ್ಗೆ ಮಾತನಾಡುವುದಿಲ್ಲ. ಈಗ ರಾಮ ರಾಮ ಅಂತಿದ್ದಾರೆ. ಜನ ಬುದ್ಧಿವಂತರು, ಎಲ್ಲವೂ ಅರ್ಥ ಆಗುತ್ತದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next