Advertisement

ಮೋದಿ ಅಲೆ ಕಡಿಮೆಯಾಗ್ತಿದೆ, ಇವಿಎಂ ಮೇಲೆ ಸಂಶಯ; ಸಿದ್ದರಾಮಯ್ಯ

03:59 PM Dec 18, 2017 | Sharanya Alva |

ಯಾದಗಿರಿ/ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಕಡಿಮೆಯಾಗುತ್ತಿರುವುದಕ್ಕೆ ಈ ಫಲಿತಾಂಶ ಸಾಕ್ಷಿ. ಅಲ್ಲದೇ ತನಗೆ ಈಗಲೂ ಇವಿಎಂ, ವಿವಿಪ್ಯಾಟ್ ಮೇಲೆ ಅನುಮಾನವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಸೋಮವಾರ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಯಾದಗಿರಿ ಮತ್ತು ಬಳ್ಳಾರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಗುಜರಾತ್ ನಲ್ಲಿ ನಾವು ಗೆದ್ದು ಸೋತಿದ್ದೇವೆ. ನೋಟು ಅಮಾನ್ಯೀಕರಣ, ಜಿಎಸ್ ಟಿ ಬಿಜೆಪಿಗೆ ಬಿಸಿ ಮುಟ್ಟಿಸಿದೆ ಎಂದರು.

ನಾನು ಗುಜರಾತ್ ನೆಲದವನು, ತನಗೆ ಆಶೀರ್ವಾದ ಮಾಡಿ ಎಂದು ಪ್ರಧಾನಿ ಮೋದಿ ಮತದಾರರಲ್ಲಿ ವಿನಂತಿಸಿಕೊಂಡಿದ್ದರು. ಆದರೆ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆದಿದೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ರಾಹುಲ್ ಗಾಂಧಿಗೆ ಎಐಸಿಸಿ ಸಾರಥ್ಯದ ಕೊಡುಗೆ ನೀಡುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next