Advertisement

PM ಮೋದಿಯವರನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

05:17 PM Jun 27, 2024 | Team Udayavani |

ಬೆಂಗಳೂರು: ಜೂನ್ 29 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿಕೆ ನೀಡಿದ್ದಾರೆ.

Advertisement

ಮೂರು ದಿನಗಳ ಕಾಲ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಲಿದ್ದು, ಕೇಂದ್ರದಿಂದ ಅನುಮೋದನೆಗೆ ಬಾಕಿ ಇರುವ ರಾಜ್ಯದ ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

“ನಾನು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಲಿದ್ದೇನೆ. ಹಣಕಾಸು ಸಚಿವರನ್ನು ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತೇನೆ. ಗೃಹ ಸಚಿವರು ಇನ್ನೂ ಸಮಯ ನೀಡಿಲ್ಲ ಅವರು ಇಂದು ನೀಡಬಹುದು. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಲಾಗುವುದು ಎಂದು ಸಿಎಂ ಸುದ್ದಿಗಾರರಿಗೆ ತಿಳಿಸಿದರು.

ಗುರುವಾರ ಸಂಜೆ ರಾಷ್ಟ್ರ ರಾಜಧಾನಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯದಿಂದ ಚುನಾಯಿತ ಸಂಸದರು ಮತ್ತು ಕೇಂದ್ರ ಸಚಿವರ ಸಭೆಯನ್ನು ಕರೆದಿದ್ದಾರೆ. ಕೇಂದ್ರದ ಒಪ್ಪಿಗೆಯ ಕರ್ನಾಟಕಕ್ಕೆ ಸಂಬಂಧಿಸಿದ ಯೋಜನೆಗಳ ಕುರಿತು ಚರ್ಚಿಸಲಿದ್ದಾರೆ.

”ನಾವು ಕೇಂದ್ರ ಸರ್ಕಾರದ ಮಟ್ಟದಲ್ಲಿ ಬಾಕಿ ಇರುವ ಯೋಜನೆಗಳ ಪಟ್ಟಿಯನ್ನು ಹಂಚಿಕೊಳ್ಳುತ್ತೇವೆ ಮತ್ತು ಯೋಜನೆಗಳಿಗೆ ಅನುಮೋದನೆ ಪಡೆಯಲು ಮತ್ತು ಕೇಂದ್ರದಿಂದ ಹಣ ಪಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರದ ಪರವಾಗಿ ಪ್ರಯತ್ನಗಳನ್ನು ಮಾಡಲು ಮತ್ತು ರಾಜ್ಯಕ್ಕೆ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಸಹಾಯ ಮಾಡಲು ಅವರನ್ನು ಕೇಳುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಯೋಜನೆಗಳ ಬಗ್ಗೆ ವಿವರಿಸಲು ರಾಜ್ಯ ಸರ್ಕಾರದ ಹಲವಾರು ಸಂಬಂಧಪಟ್ಟ ಸಚಿವರು ದೆಹಲಿಗೆ ಬರುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ಕೇಂದ್ರದ ಹೊಸ ಸರ್ಕಾರ ಮಂಡಿಸಲಿರುವ ಮೊದಲ ಬಜೆಟ್‌ನಿಂದ ಕರ್ನಾಟಕದ ನಿರೀಕ್ಷೆಗಳೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ , ”ರಾಜ್ಯ ಸರ್ಕಾರವು ಈಗಾಗಲೇ ಸಚಿವ ಕೃಷ್ಣ ಬೈರೇಗೌಡರ ಮೂಲಕ ಕೇಂದ್ರದೊಂದಿಗೆ ತನ್ನ ಆಲೋಚನೆಗಳನ್ನು ಹಂಚಿಕೊಂಡಿದೆ. ನನಗೆ ಸಾಧ್ಯವಾಗದ ಕಾರಣ ಕೃಷ್ಣ ಬೈರೇಗೌಡರು ಸಭೆಗೆ ಹಾಜರಾಗಿದ್ದರು. ಅವರು ಸಭೆಯಲ್ಲಿ ನನ್ನ ಭಾಷಣವನ್ನು ಮಂಡಿಸಿದ್ದಾರೆ’ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next