ಹನೂರು: ಕಾವೇರಿ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ, ಈ ಸಂಬಂಧ ಈಗಾಗಲೇ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು ಈ ವಿಚಾರ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಚಾಲೆಂಜ್ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು .
ಪ್ರಸಿದ್ಧ ಯಾತ್ರಾಸ್ಥಳ ಮಾದೇಶ್ವರ ಬೆಟ್ಟದಲ್ಲಿ ಮಾದಪ್ಪನ ದರ್ಶನ ಪಡೆದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿರ್ವಹಣಾ ಸಮಿತಿ 18 ದಿನಗಳ ಕಾಲ 3000 ಕ್ಯೂಸೆಕ್ ನೀರು ಬಿಡುವಂತೆ ಮಾಡಿರುವ ಆದೇಶ ಕುರಿತು ಮಾತನಾಡಿ ಸದ್ಯ ನಮ್ಮ ಬಳಿ ನೀರು ಇಲ್ಲ, ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಈ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು ಈ ವಿಚಾರವನ್ನು ಸುಪ್ರೀಂ ಕೋರ್ಟ್ ನಲ್ಲಿ ಚಾಲೆಂಜ್ ಮಾಡುತ್ತೇವೆ ಎಂದು ತಿಳಿಸಿದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ನೀರಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ, ಮಾಡುತ್ತಲೇ ಇರುತ್ತವೆ ಎಂದು ಕಿಡಿ ಕಾರಿದರು.
ರಾಜ್ಯದಲ್ಲಿ ತೀವ್ರ ಬರಗಾಲ ಇರುವ ಬಗ್ಗೆ ಪ್ರತಿಕ್ರಿಯಿಸಿ ಮಳೆಗಾಗಿ ಮಹದೇಶ್ವರನ ಮೊರೆ ಹೋಗಿದ್ದು ವಿಶೇಷ ಪೂಜೆ ಸಲ್ಲಿಸಿದ್ದೇವೆ. ನನಗೆ ಮಾದ ಪ್ಪನ ಮೇಲೆ ನಂಬಿಕೆ ಇದ್ದು ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ ಎಂಡು ವಿಶ್ವಾಸ ವ್ಯಕ್ತಪಡಿಸಿದರು.
ಚಾಮರಾಜನಗರ ಜಿಲ್ಲೆಗೆ ಕಳೆದ 5 ವರ್ಷಗಳ ಅವಧಿಯಲ್ಲಿ 12 ಬಾರಿ ಭೇಟಿ ನೀಡಿದ್ದು ಮೌಢ್ಯತೆ ತೊಡೆದು ಹಾಕಿ 5 ವರ್ಷ ಸುಭದ್ರ ಸರ್ಕಾರ ನೀಡಿದ್ದೆ ಎಂದು ತಿಳಿಸಿದರು.
ಇದನ್ನೂ ಓದಿ: ISKCON: ಗೋರಕ್ಷಣೆ ಹೆಸರಲ್ಲಿ ಇಸ್ಕಾನ್ ಗೋವುಗಳನ್ನು ಕಟುಕರಿಗೆ ಮಾರುತ್ತಿದೆ… ಮನೇಕಾ ಗಾಂಧಿ