Advertisement

ಎಲ್ಲರೂ ಒಂದಾಗಿ ನನ್ನ ವಿರುದ್ಧ ತೊಡೆ ತಟ್ಟಿರುವುದೇಕೆ ಗೊತ್ತಾ? ಸಿಎಂ

11:39 AM Oct 30, 2017 | Sharanya Alva |

ಮೈಸೂರು: ರಾಜ್ಯದ ಜನರು ಸಿದ್ದರಾಮಯ್ಯ ಪರ ಇದ್ದಾರೆ ಎಂಬ ಭಯ ಬಿಜೆಪಿ, ಜೆಡಿಎಸ್ ನದ್ದಾಗಿದೆ. ಸಿದ್ದರಾಮಯ್ಯ ಎಂದ್ರೆ ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲರಿಗೂ ಭಯ ಶುರುವಾಗಿದೆ. ಈಗ ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಎಲ್ಲರೂ ಒಂದಾಗಿದ್ದಾರೆ. ನನ್ನ ಬಗ್ಗೆ ಭಯ ಇಲ್ಲದಿದ್ದರೆ ಎಲ್ಲರೂ ಒಂದಾಗಿ ನನ್ನ ವಿರುದ್ಧ ತೊಡೆ ತಟ್ಟಿರುವುದೇಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Advertisement

ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯಷ್ಟು ಡರ್ಟಿ ಪಾಲಿಟಿಕ್ಸ್ ಮಾಡುವವರು ಎಲ್ಲೂ ಇಲ್ಲ. ಬಿಜೆಪಿಯ ರಾಜಕಾರಣಿಗಳು ಕೊಳಕು ಮನಸ್ಥಿತಿಯವರು. ಅವರಿಗೆ ರಾಜ್ಯದ ಕಾಂಗ್ರೆಸ್ ಆಡಳಿತ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ದೂರಿದರು.

ಭಾರತೀಯ ಜನತಾ ಪಕ್ಷದವರಿಗೆ ಸುಳ್ಳು ಹೇಳೋದು ಬಿಟ್ಟರೆ ಬೇರೆ ಗೊತ್ತಿಲ್ಲ. ಹೀಗಾಗಿ ಕಾಂಗ್ರೆಸ್ ವಿರುದ್ಧ ಸುಮ್ಮನೆ ಆರೋಪಿಸುತ್ತಾರೆ.

ಪ್ರಧಾನಿ ಮೋದಿಗೆ ನನ್ನ ಕಂಡರೆ ಭಯ:

ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಕಂಡರೆ ಭಯ. ಅದಕ್ಕೆ ಅವರು ರಾಜ್ಯಕ್ಕೆ ಬಂದಾಗಲೆಲ್ಲಾ ನನ್ನ ಟಾರ್ಗೆಟ್ ಮಾಡಿ ಮಾತನಾಡುತ್ತಾರೆ. ಬಿಜೆಪಿ ನಾಯಕರಿಗೆ ನನ್ನ ಕಂಡರೆ ಭಯವಿದೆ. ಇಲ್ಲದಿದ್ದರೆ ಪದೇ, ಪದೇ ಯಾಕೆ ವಾಗ್ದಾಳಿ ನಡೆಸುತ್ತಾರೆ ಎಂದು ಪ್ರಶ್ನಿಸಿದರು.

Advertisement

ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ:
ಮಂಡ್ಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ವಧು ಸೇರಿದಂತೆ 13 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದರು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸ್ಥಳಕ್ಕೆ ಭೇಟಿ ನೀಡುವಂತೆ ಉಸ್ತುವಾರಿ ಸಚಿವರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next