Advertisement

ನಾಳೆ ದ.ಕ,ಉಡುಪಿ ಹಾಗೂ ಉ.ಕ ಜಿಲ್ಲೆಗಳಿಗೆ ಮುಖ್ಯಮಂತ್ರಿ ಪ್ರವಾಸ

08:07 PM Aug 11, 2019 | sudhir |

ಮಂಗಳೂರು :ಪ್ರವಾಹದಿಂದ ನಲುಗಿದ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಭವಿಸಿದ ಮಳೆಹಾನಿ ವೀಕ್ಷಣೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಗಸ್ಟ್ 12 ಸೋಮವಾರದಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

Advertisement

ಅಂದು ಕಾರವಾರದಲ್ಲಿ ವಾಸ್ತವ್ಯ ಹೂಡಿ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಜೊತೆ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಲಿದ್ದಾರೆ.

ಆಗಸ್ಟ್ 13ರಂದು ಕಾರವಾರದಿಂದ ಹೊರಟು ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳ ಮಳೆಹಾನಿ ಕುರಿತು ಪರಿಶೀಲನೆ ನಡೆಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next