Advertisement
ಇನ್ಮುಂದೆ ನಾನೇ ಖುದ್ದು ಪರಿಶೀಲನೆ ಮಾಡ್ತೀನಿ…’! -ಮಳೆ ನೀರುಗಾಲುವೆಗಳ ಪ್ರಗತಿಗೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳಿಗೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚುರುಕು ಮುಟ್ಟಿಸಿದ ಪರಿ ಇದು. ಇತ್ತೀಚೆಗೆ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಕುರಿತು ಕೈಗೊಳ್ಳಬೇಕಾದ ಕ್ರಮಗಳಿಗೆ ಸಂಬಂಧಿಸಿದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ನಗರದಲ್ಲಿ ಬೃಹತ್ ಮಳೆ ನೀರುಗಾಲುವೆಯಲ್ಲಿ ಎಷ್ಟು ಕಿ.ಮೀ. ಕೈಗೆತ್ತಿಕೊಳ್ಳಲಾಗಿದೆ?
Related Articles
Advertisement
ನೀವು ಪ್ರಗತಿಯ ಮಾಹಿತಿ ಕೊಡಿ, ಇನ್ಮುಂದೆ ನಾನೇ ಪರಿಶೀಲನೆ ನಡೆಸುತ್ತೇನೆ ಎಂದ ಮುಖ್ಯಮಂತ್ರಿಗಳು, ಪ್ರತಿ 15 ದಿನಗಳಿಗೊಮ್ಮೆ ಪ್ರಾಥಮಿಕ ನೀರುಗಾಲುವೆಗಳ ಕಾಮಗಾರಿಗಳನ್ನು ಸಿಎಂ ಡ್ಯಾಶ್ ಬೋರ್ಡ್‌ನಲ್ಲಿ ಖುದ್ದು ಪರಿಶೀಲನೆ ನಡೆಸುತ್ತೇನೆ. ಅಗತ್ಯಬಿದ್ದರೆ, ಸ್ಥಳಕ್ಕೂ ಭೇಟಿ ನೀಡುತ್ತೇನೆ’ ಎಂದು ತಿಳಿಸಿದರು.
ಅಷ್ಟೇ ಅಲ್ಲ, ಕಾಮಗಾರಿ ಪ್ರಗತಿ ಬಗ್ಗೆ ಎಂಜಿನಿಯರ್ ಗಳಿಗೆ ಖುದ್ದು ಕರೆ ಮಾಡಿ ವಿಚಾರಿಸಲಾಗುವುದು. ಹಾಗೊಂದು ವೇಳೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ಕಂಡುಬಂದರೆ, ಅಂತಹ ಅಧಿಕಾರಿಗಳನ್ನು ಮುಲಾಜಿಲ್ಲದೆ ಅಮಾನತು ಗೊಳಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ ಅವರು, ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು. ಎಂಜಿನಿಯರ್‌ಗಳಿಗೆ ಕೆಲಸ ಮರುಹಂಚಿಕೆ ಮಾಡಲಾಗುವುದು ಎಂದರು.
130 ಎಂಜಿನಿಯರ್‌ಗಳ ನೇಮಕ
ತ್ವರಿತ ಕಾಮಗಾರಿಗಳು ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳಿಗಾಗಿ 130 ಎಂಜಿನಿಯರ್‌ಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಸೂಚನೆ ನೀಡಲಾಗಿದೆ. ರಾಜಕಾಲುವೆಗಳ ಹೂಳು ತೆಗೆಯಲಿಕ್ಕೂ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಬಿಡಿಎ ಬಡಾವಣೆಗಳಲ್ಲಿ ವಿದ್ಯುತ್ಛಕ್ತಿ, ಚರಂಡಿ ಹಾಗೂ ನೀರಿನ ವ್ಯವಸ್ಥೆ ಮಾಡುವ ಬಗ್ಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು. 2,626 ಒತ್ತುವರಿಯಾಗಿರುವ ರಾಜಕಾಲುವೆಗಳನ್ನು ಗುರುತಿಸಿದ್ದು, ಅದರಲ್ಲಿ 1,480 ತೆರವುಗೊಳಿಸಿದ್ದಾರೆ.
ಇನ್ನು 714 ಅನ್ನು ತೆರೆವುಗೊಳಿಸಲು ಕಾನೂನಾತ್ಮಕವಾಗಿ ಕ್ರಮ ಜರುಗಿಸುತ್ತೇವೆ. ಬಡವರಿಗೆ ತೊಂದರೆ ಕೊಡಬಾರದು. ಅವರ ಸ್ಥಳಾಂತರಕ್ಕೆ ಸಮಯ ನೀಡುವಂತೆ ಸೂಚಿಸಲಾಗಿದೆ. ದೊಡ್ಡ ಬಿಲ್ಡರ್‌ಗಳು ಒತ್ತುವರಿ ಮಾಡಿದ್ದರೆ, ಕೂಡಲೇ ಅದನ್ನು ತೆರವುಗೊಳಿಸಲು ಸ್ಪಷ್ಟ ಆದೇಶ ನೀಡಲಾಗಿದೆ ಎಂದು ಪುನರುತ್ಛರಿಸಿದರು. ಸಚಿವರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ವಿ. ಸೋಮಣ್ಣ, ಎಸ್.ಟಿ. ಸೋಮಶೇಖರ್, ಬಿ.ಎ. ಬಸವರಾಜ (ಬೈರತಿ), ಕೆ.ಗೋಪಾಲಯ್ಯ, ಮುನಿರತ್ನ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತ ಇದ್ದರು.
ಬಾಕಿ 35 ಕಿ.ಮೀ. ಕಾಲುವೆಗೆ ಜನವರಿ ಗಡುವು
ವೃಷಭಾವತಿ, ಹೆಬ್ಟಾಳ, ಚಲ್ಲಘಟ್ಟ ಮತ್ತು ಕೋರಮಂಗಲ ನಗರದ ನಾಲ್ಕು ವ್ಯಾಲಿಗಳಿಗೆ 842 ಕಿ.ಮೀ. ರಾಜ ಕಾಲುವೆ ಇದೆ. ಈ ಪೈಕಿ 415 ಕಿ.ಮೀ. ಈಗಾಗಲೇ ಪೂರ್ಣಗೊಂಡಿದೆ. 2019-20ರಲ್ಲಿ 75 ಕಿ.ಮೀ. ರಾಜಕಾಲುವೆ ನಿರ್ಮಾಣಕ್ಕೆ ಅನುಮತಿ ನೀಡಲಾಗಿದ್ದು, ಅದರಲ್ಲಿ 40 ಕಿ.ಮೀ. ಕಾಮಗಾರಿ ಪೂರ್ಣ ಗೊಂಡಿದೆ.
ಉಳಿದ 35 ಕಿ.ಮೀ. ಅನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಗಡುವು ವಿಧಿಸಲಾಗಿದೆ. ಹಲವು ತೀವ್ರ ಸಮಸ್ಯೆಗೆ ಕಾರಣವಾಗುವ ಸ್ಥಳಗಳನ್ನು ಗುರುತಿಸಲಾಗಿದ್ದು, ಅಂತಹ ಸುಮಾರು 94 ಸ್ಥಳಗಳಿವೆ. ಅವುಗಳನ್ನು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.
90 ಕಿ.ಮೀ. ನೀರುಗಾಲುವೆ; 900 ಕೋಟಿ ವೆಚ್ಚ
ಬೆಂಗಳೂರು: ನಗರದ 51.5 ಕಿ.ಮೀ. ಬೃಹತ್ ಮತ್ತು 38 ಕಿ.ಮೀ. ಉಪ ಪ್ರಮುಖ ಮಳೆ ನೀರುಗಾಲುವೆಗಳನ್ನು 900 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಬರುವ ಮಳೆಗಾಲದ ಒಳಗೆ ಈ ಯೋಜನೆ ಪೂರ್ಣಗೊಳಿಸಲು ಗಡುವು ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಲ್ಲಘಟ್ಟ ಮತ್ತು ವೃಷಭಾವತಿ ಯಲ್ಲಿಯೂ ಇಂತಹ ತೀವ್ರ ಸಮಸ್ಯಾತ್ಮಕ ಸ್ಥಳಗಳಿವೆ ಎಂಬ ಮಾಹಿತಿಯನ್ನು ಪಡೆದಿದ್ದೇನೆ.
ಸುಮಾರು 51 ಕಿ.ಮೀ. ಬೃಹತ್ ನೀರುಗಾಲುವೆಗಳು ಕೂಡಲೇ ಆಗಬೇಕಿವೆ. ಉಳಿದ 38 ಕಿ.ಮೀ. ಉಪ ಮುಖ್ಯ ಚರಂಡಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಿದೆ. ಇವುಗಳನ್ನು 900 ಕೋಟಿ ವೆಚ್ಚದಲ್ಲಿ ನಿರ್ಮಿಸುವ ಉದ್ದೇಶ ಇದೆ. ಈ ಸಂಬಂಧದ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದು, ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು. ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಜನರಿಗೆ ಯಾವುದೇ ರೀತಿ ತೊಂದರೆಯಾಗಬಾರದು ಎಂದು ಸೂಚನೆ ನೀಡಿರುವುದಾಗಿ ಮಾಹಿತಿ ನೀಡಿದರು.
1 ಅಡಿಗಿಂತ ಹೆಚ್ಚು ಆಳದ ಗುಂಡಿಗೆ ಆದ್ಯತೆ
ನಗರದಲ್ಲಿ ಸತತ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲೆಡೆ ರಸ್ತೆಗಳಲ್ಲಿ ಗುಂಡಿ ನಿರ್ಮಾಣವಾಗಿವೆ. ಮಳೆ ನಿಂತ ತಕ್ಷಣ 1 ಅಡಿಗಿಂತ ಹೆಚ್ಚು ಆಳದ ಗುಂಡಿಗಳನ್ನು ಮುಚ್ಚಲು ಮೊದಲ ಆದ್ಯತೆ ನೀಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜತೆಗೆ, ಹೆಚ್ಚು ವಿಸ್ತೀರ್ಣದಲ್ಲಿ (ಲಾಂಗ್ ಸ್ಟ್ರೆಚ್) ರಸ್ತೆ ಹಾಳಾಗಿದ್ದರೆ ಅದನ್ನು ಸಂಪೂರ್ಣವಾಗಿ ಮರುಡಾಂಬರೀಕರಣ ಮಾಡಲು ಸೂಚಿಸ ಲಾಗಿದೆ. ವಾಹನ ಸಂಚಾರಕ್ಕೆ ಸಮರ್ಪಕ ರಸ್ತೆ ಒದಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.