Advertisement

68.15 ಲಕ್ಷ ಜಾಹೀರಾತು ಶುಲ್ಕ ವಂಚನೆ; ಸಿಎಂ ವಿರುದ್ಧ ಲೋಕಾದಲ್ಲಿ ದೂರು

01:28 PM Jun 20, 2017 | Team Udayavani |

ಬೆಂಗಳೂರು: ಆಡಳಿತಾರೂಢ ರಾಜ್ಯ ಸರ್ಕಾರದ 3ನೇ ಮತ್ತು 4ನೇ ವರ್ಷದ ಸಾಧನೆಯ ಪ್ರಚಾರಕ್ಕಾಗಿ ಬಿಬಿಎಂಪಿ ಒಡೆತನದ ಬಸ್ ಶೆಲ್ಟರ್ ಅನ್ನು ಜಾಹೀರಾತಿಗೆ ಬಳಸಿಕೊಂಡಿತ್ತು. ಆದರೆ ಕಳೆದ 2 ವರ್ಷಗಳ ಜಾಹೀರಾತು ಶುಲ್ಕ 68.15 ಕೋಟಿ ರೂಪಾಯಿಯಷ್ಟು ಹಣವನ್ನು ವಂಚಿಸಿರುವುದಾಗಿ ಆರೋಪಿಸಿ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಸಿಎಂ ಹಾಗೂ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

Advertisement

439 ಬಸ್ ನಿಲ್ದಾಣಗಳ ಜಾಹೀರಾತು ಅಳವಡಿಕೆಯಲ್ಲಿ ಅಕ್ರಮ ಮಾಡಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡುವ ನಿಟ್ಟಿನಲ್ಲಿ ಪಾಲಿಕೆಗೆ ನೀಡಬೇಕಾಗಿದ್ದ ಶುಲ್ಕವನ್ನೇ ನೀಡಿಲ್ಲ ಎಂದು ಆರೋಪಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್, 2ವರ್ಷಗಳಿಂದ 68.15 ಕೋಟಿ ರೂಪಾಯಿ ಜಾಹೀರಾತು ಶುಲ್ಕವನ್ನು ರಾಜ್ಯ ಸರ್ಕಾರ ವಂಚಿಸಿದೆ. ಈ ಬಗ್ಗೆ ಐಎಎಸ್ ಅಧಿಕಾರಿ ರಶ್ಮಿ ಅವರು ರಾಜ್ಯ ಸರ್ಕಾರಕ್ಕೆ ಡಿಮ್ಯಾಂಡ್ ನೋಟಿಸ್ ನೀಡಲು ಮುಂದಾಗಿದ್ದರು ಎಂದು ತಿಳಿಸಿದರು.

ಪ್ರತಿವರ್ಷ 34.07 ಲಕ್ಷ ರೂಪಾಯಿ ಜಾಹೀರಾತು ಶುಲ್ಕ ವಂಚಿಸಲಾಗಿದೆ. 2 ವರ್ಷದ 68.15 ಲಕ್ಷ ಜಾಹೀರಾತು ಶುಲ್ಕ ವಂಚಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನ ಕಾರ್ಯದರ್ಶಿ , ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ವಿರುದ್ಧ ಲೋಕಾಯುಕ್ತ ಹಾಗೂ ಎಸಿಬಿಯಲ್ಲಿ ದೂರು ದಾಖಲಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next