Advertisement
ಇಲ್ಲಿನ ಆರ್.ಡಿ.ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನ ವಿರೋಧಿ ಆಡಳಿತ ವಿರುದ್ಧ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಆರಂಭಿಸಿದೆ. ಇದು ಜ.28ರವರೆಗೆ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲಿದ್ದು, ಒಂದು ದಿನಕ್ಕೆ ಎರಡು ಜಿಲ್ಲೆಗೆ ಭೇಟಿ ನೀಡಲಿದೆ. ಕಾಂಗ್ರೆಸ್ ನುಡಿದಂತೆ ನಡೆದ ಪಕ್ಷ. ಜನರಿಗೆ ಸುಳ್ಳು ಹೇಳಲ್ಲ. ನಮ್ಮ ಪಕ್ಷ ಅಧಿ ಕಾರಕ್ಕೆ ಬಂದ ಸಂದರ್ಭದಲ್ಲಿ ಬಡವರು, ದಲಿತರು, ರೈತರು, ಮಹಿಳೆಯರ ಪರವಾಗಿ ಕಾರ್ಯಕ್ರಮ ನೀಡಿದೆ.
Related Articles
Advertisement
ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ ಮಾತನಾಡಿ, ಬಿಜೆಪಿ ದುರಾಡಳಿತ, ದೌರ್ಜನ್ಯ ವಿರುದ್ಧ ಈ ಯಾತ್ರೆ ಆರಂಭವಾಗಿದೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟು ಹೋಗಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ. ಸ್ವಾತಂತ್ರÂ ಹೋರಾಟದಲ್ಲಿ ಬಿಜೆಪಿ ಕೊಡುಗೆ ಏನೂ ಇಲ್ಲ. ಧರ್ಮದ ಹೆಸರಿನಲ್ಲಿ ನಮಗೆ ಪಾಠ ಹೇಳುವ ಅವಶ್ಯಕತೆ ಇಲ್ಲ ಎಂದರು.
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಅಹ್ಮದ, ಹಿರಿಯ ಮುಖಂಡರಾದ ಆರ್.ವಿ.ದೇಶಪಾಂಡೆ. ಯು.ಟಿ.ಖಾದರ್, ಎಚ್.ಕೆ.ಪಾಟೀಲ, ವಿನಯ ಕುಲಕರ್ಣಿ, ಶಾಸಕಿ ಲಕ್ಷಿ¾à ಹೆಬ್ಟಾಳಕರ, ಅಂಜಲಿ ನಿಂಬಾಳಕರ, ಪಿ.ಟಿ.ಪರಮೇಶ್ವರ ನಾಯಕ ಸೇರಿದಂತೆ ಇತರರು ಇದ್ದರು.
ವಂದೇ ಮಾತರಂ ರೈಲಿನ ಹೆಸರು ಜಪ: ಸತೀಶಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತನಾಡಿ, ಬಿಜೆಪಿ ಸರ್ಕಾರ ಕಿತ್ತೂಗೆಯಲು ಕಾಂಗ್ರೆಸ್ ಕಾರ್ಯಕರ್ತರು ಸನ್ನದ್ಧರಾಗಬೇಕಿದೆ. ಬಿಜೆಪಿ ದುರಾಡಳಿತಕ್ಕೆ ಬೇಸತ್ತು ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಿಗಲಿದೆ. ಸಿದ್ದರಾಮಯ್ಯ ಸರ್ಕಾರದ ಯೋಜನೆ ಸ್ಥಗಿತಗೊಳಿಸುವ ಬಿಜೆಪಿಗೆ ಜನ ತಕ್ಕ ಪಾಠ ಕಲಿಸಲಿದೆ. ಅಂಧ ಭಕ್ತರು ಬುಲೆಟ್ ಟ್ರೇನ್ ಬಿಟ್ಟು ಈಗ ವಂದೇ ಮಾತರಂ ರೈಲಿನ ಹೆಸರು ಹೇಳುತ್ತಿದ್ದಾರೆ ಎಂದರು. ಪ್ರಜಾಧ್ವನಿ ಯಾತ್ರೆಗೆ ಜನಸಾಗರ
ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಗೆ ಚಿಕ್ಕೋಡಿಯಲ್ಲಿ ಭಾರೀ ಜನ ಬೆಂಬಲ ವ್ಯಕ್ತವಾಗಿದೆ. ಪ್ರತಿ ಲೋಕಸಭೆ ಕ್ಷೇತ್ರದ ಜಿಲ್ಲಾ ಕೇಂದ್ರದಲ್ಲಿ ಮೊದಲ ಹಂತದಲ್ಲಿ ನಡೆಯುವ ಈ ಯಾತ್ರೆಗೆ ಚಿಕ್ಕೋಡಿ ಭಾಗದಲ್ಲಿ ಮೊದಲ ದಿನ ಜನಸಾಗರವೇ ಹರಿದು ಬಂದಿತ್ತು. ಬಸ್ ಮೂಲಕ ವೇದಿಕೆಗೆ ಆಗಮಿಸಿದ ಗಣ್ಯರು
ಬೆಳಗಾವಿ ಮೂಲಕ ಚಿಕ್ಕೋಡಿಗೆ ವಿಶೇಷ ಬಸ್‌ನಲ್ಲಿ ಆಗಮಿಸಿದ ಕಾಂಗ್ರೆಸ್ ಮುಖಂಡರನ್ನು ಜೈನಾಪೂರದಿಂದ ಚಿಕ್ಕೋಡಿವರೆಗೆ ಬೈಕ್ ರ್ಯಾಲಿ ಮೂಲಕ ಸ್ವಾಗತಿಸಿದರು. ಬಸವ ವೃತ್ತದಿಂದ ಕುಂಭ ಮೇಳ, ವಾದ್ಯದೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ನಾಯಕರು ವೇದಿಕೆ ಕಡೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಚಪ್ಪಾಳೆ, ಸಿಳ್ಳೆ ಜೋರಾದವು. ಇಬ್ಬರು ನಾಯಕರೂ ಜನರತ್ತ ಕೈ ಬೀಸಿ ವೇದಿಕೆ ಏರಿದರು. ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ, ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆ ಉದ್ದೇಶ.
-ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ