Advertisement

ಮಾಡಾಳು ವಿರೂಪಾಕ್ಷಪ್ಪ ಪ್ರಕರಣ: ಕಾಂಗ್ರೆಸ್‌ ಅಸಮಾಧಾನ

12:10 AM Mar 09, 2023 | Team Udayavani |

ಬೆಂಗಳೂರು: ಕೆಎಸ್‌ಡಿಎಲ್‌ ಲಂಚ ಪ್ರಕರಣದ ಆರೋಪಕ್ಕೆ ಗುರಿಯಾಗಿರುವ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತಿರುವುದಕ್ಕೆ ಕಾಂಗ್ರೆಸ್‌ ಅಸಮಾಧಾನ ವ್ಯಕ್ತಪಡಿಸಿದೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಲೋಕಾಯುಕ್ತ¤ ದಾಳಿ ವೇಳೆ ವಿರೂಪಾಕ್ಷಪ್ಪ ಅವರ ಕಚೇರಿ ಹಾಗೂ ನಿವಾಸದಲ್ಲಿ ಸುಮಾರು 8 ಕೋಟಿ ರೂ. ಸಿಕ್ಕಿದೆ. ಈ ಪ್ರಕರಣದಲ್ಲಿ ಶಾಸಕರಿಗೆ ಒಂದೇ ದಿನದಲ್ಲಿ ಜಾಮೀನು ಸಿಕ್ಕಿದೆ. ಸರಕಾರ ಹಾಗೂ ಸರಕಾರಿ ವಕೀಲರ ಬೆಂಬಲ ಇಲ್ಲವಾದರೆ ಕೇವಲ ಒಂದೇ ದಿನದಲ್ಲಿ ಜಾಮೀನು ಸಿಗಲು ಹೇಗೆ ಸಾಧ್ಯ? ಇಂತಹ ಪ್ರಕರಣದಲ್ಲಿ ವಿಪಕ್ಷದವರಿಗೆ 2-3 ತಿಂಗಳಾದರೂ ಜಾಮೀನು ಸಿಗುವುದಿಲ್ಲ ಎಂದರು.

ಡಿಕೆಶಿದ್ದು ಬಹಿರಂಗ ಸಭೆ!
ಮಾಡಾಳು ವಿರೂಪಾಕ್ಷಪ್ಪ ಅವರ ಮೆರವಣಿಗೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಬಿಜೆಪಿಯವರಿಗೆ ಇದೇನು ಹೊಸದಲ್ಲ. ಸಾಧ್ವಿ ಪ್ರಜ್ಞಾ ಸಿಂಗ್‌ ಅವರು ಭಯೋತ್ಪಾದಕ ಪ್ರಕರಣದಲ್ಲಿ ಜಾಮೀನು ಪಡೆದಿದ್ದರೂ ಬಿಜೆಪಿಯವರು ಅವರಿಗೆ ಟಿಕೆಟ್‌ ನೀಡಿ ಸಂಸದರನ್ನಾಗಿ ಮಾಡಿದ್ದಾರೆ. ಗುಜರಾತಿನಲ್ಲಿ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿ ಭವ್ಯ ಸ್ವಾಗತ ನೀಡಿದ್ದಾರೆ. ಬಿಜೆಪಿ ಸಂಸ್ಕೃತಿಯೇ ಇಂಥದ್ದು ಎಂದರು.

ಡಿ.ಕೆ. ಶಿವಕುಮಾರ್‌ ಭ್ರಷ್ಟಾ ಚಾರ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆಯಾದಾಗ ನಡೆದಿದ್ದ ಮೆರವಣಿಗೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಶಿವಕುಮಾರ್‌ ಪ್ರಕರಣವೇ ಬೇರೆ, ಈ ಪ್ರಕರಣವೇ ಬೇರೆ. ಆಗ ಸಾರ್ವಜನಿಕ ಬಹಿರಂಗ ಸಭೆ ಮಾಡಿ ಅವರಿಗೆ ಆದ ಅನ್ಯಾಯದ ಬಗ್ಗೆ ತಿಳಿಸಲಾಗಿತ್ತು. ಆದರೆ ಇಲ್ಲಿ ಮೆರವಣಿಗೆ ಮಾಡಲಾಗಿದೆ ಎಂದು ಹೇಳಿದರು.

ಸಚಿವರು ಕಾಂಗ್ರೆಸ್‌ ಸೇರುವ ಮಾಹಿತಿಯಿಲ್ಲ
ಸಚಿವರಾಗಿರುವ ಕೆ. ಸಿ. ನಾರಾಯಣ ಗೌಡ ಹಾಗೂ ವಿ. ಸೋಮಣ್ಣ ಕಾಂಗ್ರೆಸ್‌ ಸೇರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಈ ಬಗ್ಗೆ ಶಿವಕುಮಾರ್‌ ಅವರನ್ನೇ ಕೇಳಬೇಕು ಎಂದು ಹೇಳಿದರು.

Advertisement

ಹೈಡ್ರಾಮಾ: ಎಚ್‌.ವಿಶ್ವನಾಥ್‌
ವಿರೂಪಾಕ್ಷಪ್ಪ ಲಂಚ ಪ್ರಕರಣದಲ್ಲಿ ಸರಕಾರ ಹೈಡ್ರಾಮಾ ಮಾಡುತ್ತಿದೆ ವಿಧಾನ ಪರಿಷತ್‌ ಸದಸ್ಯ ಬಿಜೆಪಿಯ ಎಚ್‌.ವಿಶ್ವನಾಥ್‌ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

“ನಾನು ನ್ಯಾಯಾಲಯದ ವಿಚಾರವಾಗಿ ಮಾತ ನಾಡುವುದಿಲ್ಲ, ನ್ಯಾಯಾಲಯ ಯಾವ ದೃಷ್ಟಿಕೋನದಲ್ಲಿ ಜಾಮೀನು ನೀಡಿದೆಯೋ ನನಗೆ ಗೊತ್ತಿಲ್ಲ. ನಾನು ಅದನ್ನು ಪ್ರಶ್ನಿಸುವುದಿಲ್ಲ. -ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next