ನವದೆಹಲಿ: ಕರ್ನಾಟಕದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲ ವಿ.ಆರ್.ವಾಲಾ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಆಹ್ವಾನ ನೀಡದೇ ಇದ್ದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ. ಅದಕ್ಕಾಗಿಯೇ ಚಂಡೀಗಢ ಪ್ರವಾಸದಲ್ಲಿದ್ದ ರಾಜ್ಯಸಭಾ ಸದಸ್ಯ ಅಭಿಷೇಕ್ ಮನು
ಸಿಂಘ್ವಿಯವರನ್ನು ತುರ್ತಾಗಿ ನವದೆಹಲಿಗೆ ಕಾಂಗ್ರೆಸ್ ವರಿಷ್ಠ ಮಂಡಳಿ ಕರೆಸಿಕೊಂಡಿದೆ.
“ಈಗಾಗಲೇ ರಾಜ್ಯಪಾಲರನ್ನು ಭೇಟಿಯಾಗಿ ಹಕ್ಕು ಮಂಡಿಸಲಾಗಿದೆ. ಸರ್ಕಾರ ರಚನೆಗೆ ಬೇಕಾದ ಸಂಖ್ಯಾ ಬಲದ ಜತೆಗೆ ಶೇ.56ರಷ್ಟು ಮತಗಳನ್ನು ಪಡೆದು ಕೊಂಡಿದ್ದೇವೆ. ಇನ್ನೂ ಆಹ್ವಾನ ನೀಡದಿದ್ದರೆ ಸುಪ್ರೀಂಗೆ ಮನವಿ ಸಲ್ಲಿಸುತ್ತೇವೆ’ ಎಂದು ಹೆಸರು ಬಹಿರಂಗಪಡಿ ಸಲಿಚ್ಛಿಸದ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಸಿದ್ದರಾಮಯ್ಯಗೆ ಟೀಕೆ: ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದಲ್ಲಿ ಕುದುರೆ ವ್ಯಾಪಾರಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪ ಮಾಡಿರುವುದಕ್ಕೆ ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ಆಕ್ಷೇಪ ಮಾಡಿದ್ದಾರೆ. “ಸಿದ್ದರಾಮಯ್ಯನವರ ಸಂಪುಟದಲ್ಲಿನ ಕೇವಲ 16 ಸಚಿವರು ಮಾತ್ರ ಸೋತಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ. “ನಮ್ಮ ಪ್ರಧಾನಮಂತ್ರಿ ವಿರುದಟಛಿ ಅವರು ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಅದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಪ್ರಸಾದ್ ಹೇಳಿದ್ದಾರೆ.
ನಿಷೇಧ ಹೇರಲು ಒಮರ್ ಸಲಹೆ: ಒಂದು ಪಕ್ಷದಿಂದ ಮತ್ತೂಂದು ಪಕ್ಷಕ್ಕೆ ನಿಷ್ಠೆ ಬದಲಿಸುವ ಶಾಸಕರನ್ನು ಒಂದು ಅವಧಿಗೆ ಸ್ಪರ್ಧಿಸದಂತೆ ನಿಷೇಧ ಹೇರಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಒಮರ್ ಅಬ್ದುಲ್ಲಾ ಸಲಹೆ ನೀಡಿದ್ದಾರೆ. ಕರ್ನಾಟಕದಲ್ಲಿ ಚುನಾವಣೋತ್ತರ ಬೆಳವಣಿಗೆ ಬಗ್ಗೆ ಟ್ವೀಟ್ ಮಾಡಿದ ಅವರು, ಕೇವಲ ಅನರ್ಹಗೊಳಿಸುವುದರಿಂದ ಶಾಸಕರ ಖರೀದಿ ನಿಲ್ಲಿಸಲು ಸಾಧ್ಯವಿಲ್ಲ. ಅದಕ್ಕೆ ನಿಷ್ಠೆ ಬದಲಿಸುವ ಶಾಸಕರನ್ನು ಒಂದು
ಅವಧಿಗೆ ನಿಷೇಧ ಮಾಡುವುದೇ ಸೂಕ್ತ ಎಂದಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚನೆಗಾಗಿ ಕೈಜೋಡಿಸಿರುವುದು ಸ್ವಾಗತವೇ. ಆದರೆ ರಾಜ್ಯಪಾಲರು ಅವರನ್ನು ಆಹ್ವಾನಿಸುವ ಬಗ್ಗೆ ಸಂಶಯಗಳಿವೆ.
● ಎಸ್.ಸುಧಾಕರ ರೆಡ್ಡಿ, ಸಿಪಿಐ ನಾಯಕ
ಬೊಮ್ಮಾಯಿ ಪ್ರಕರಣದಲ್ಲಿ ಸದನದಲ್ಲಿಯೇ ವಿಶ್ವಾಸಮತ ಯಾಚನೆಯಾಗಬೇಕೆಂದು ಸುಪ್ರೀಂಕೋರ್ಟ್ ಹೇಳಿದೆ. ಕರ್ನಾಟಕ ರಾಜ್ಯಪಾಲರು ಕೂಡಲೇ ವಿಧಾನಸಭೆ ಅಧಿವೇಶನ ಕರೆದು ಬಹುಮತ ಸಾಬೀತುಪಡಿಸಲು ಅವಕಾಶ ನೀಡಿ, ಅಸಾಂವಿಧಾನಿಕವಾದ ಪದಟಛಿತಿಗಳಿಗೆ ಪೂರ್ಣ
ವಿರಾಮ ಹಾಕಬೇಕು.
● ನ್ಯಾ.ಸಂತೋಷ್ ಹೆಗ್ಡೆ, ನಿವೃತ್ತ ಲೋಕಾಯುಕ್ತ
ಕರ್ನಾಟಕದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟವನ್ನೇ ಆಹ್ವಾನಿಸಬೇಕು. ಏಕೆಂದರೆ ಅವರ ಬಳಿ ಸಂಖ್ಯಾ ಬಲ ಇದೆ.
● ಅರುಣ್ ಶ್ರೀವಾಸ್ತವ, ಜೆಡಿಯು ಬಂಡಾಯ ನಾಯಕ