Advertisement

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ

06:01 PM Jan 28, 2022 | Team Udayavani |

ಬೆಂಗಳೂರು: ಅಕ್ರಮ ಅದಿರು ಮಾರಾಟ, ಸರಕಾ ರಕ್ಕೆ ತೆರಿಗೆ ವಂಚನೆ ಸಂಬಂಧ ಮಾಜಿ ಸಚಿವ ಜನಾರ್ದನ ರೆಡ್ಡಿ ಸಹಿತ ಮೂವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದ್ದು, ಫೆ.12ಕ್ಕೆ ಖುದ್ದು ಹಾಜರಾತಿಗೆ ಆದೇಶಿಸಿದೆ.

Advertisement

ತನಿಖಾಧಿಕಾರಿಗಳು ನೀಡಿದ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಾದ ಜನಾರ್ದನ ರೆಡ್ಡಿ, ಅವರ ಆಪ್ತ ಕಾರ್ಯದರ್ಶಿ ಮೆಹಪೂಜ್‌ ಅಲಿಖಾನ್‌, ಓಬಳಾಪುರಂ ಮೈನಿಂಗ್‌ ಕಂಪೆನಿ ನಿರ್ದೇಶಕ ಬಿ.ವಿ. ಶ್ರೀನಿವಾಸ ರೆಡ್ಡಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿ ಸಮನ್ಸ್‌ ಜಾರಿ ಮಾಡಿದೆ.

ಆರೋಪಿತರ ಸ್ಥಳಗಳ ಮೇಲೆ 2009-10ರಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದಾಗ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ವೇಳೆ ಅಕ್ರಮವಾಗಿ ಕಬ್ಬಿಣದ ಅದಿರು ತೆಗೆದು ಸಾಗಿಸಿರುವುದು ಗೊತ್ತಾಗಿದ್ದು, ಸರಕಾರದ ಬೊಕ್ಕಸಕ್ಕೆ 23 ಲಕ್ಷ ರೂ. ನಷ್ಟವಾಗಿದೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದರು. ಈ ಸಂಬಂಧ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next