Advertisement

ರಾಜ್ಯದಲ್ಲಿ ಏರಿಕೆ ಕಂಡ ಕೋವಿಡ್ ಪ್ರಕರಣ : 2,479 ಮಂದಿಯಲ್ಲಿ ಸೋಂಕು ದೃಢ, ನಾಲ್ಕು ಸಾವು

05:28 PM Jan 04, 2022 | Team Udayavani |

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು ಮಂಗಳವಾರ ರಾಜ್ಯದಲ್ಲಿ ಒಟ್ಟು 2,479 ಪ್ರಕರಣಗಳು ದೃಢಪಟ್ಟಿವೆ ಎಂದು ಅರೋಗ್ಯ ಇಲಾಖೆ ವರದಿ ಬಿಡುಗಡೆಗೊಳಿಸಿದೆ.

Advertisement

ರಾಜಧಾನಿ ಬೆಂಗಳೂರಿನಲ್ಲೇ ಅತೀ ಹೆಚ್ಚು 2053 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ, ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 2.59% ಕ್ಕೆ ಏರಿಕೆಯಾಗಿದೆ.

ಕೋವಿಡ್ ಸೋಂಕಿನಿಂದ ರಾಜ್ಯದಲ್ಲಿ ಇಂದು ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 95,391 ಪರೀಕ್ಷೆ ನಡೆಸಲಾಗಿದೆ.

ಇಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿಲ್ಲ. ಇದುವರೆಗೆ ಒಟ್ಟು 77 ಒಮಿಕ್ರಾನ್ ಕೇಸ್ ಪತ್ತೆಯಾಗಿವೆ.

ಇದನ್ನೂ ಓದಿ :  ಅತಿಥಿ ಉಪನ್ಯಾಸಕರ ಸಮಸ್ಯೆಗೆ ಶೀಘ್ರ ಸ್ಪಂದಿಸಲು ಆಗ್ರಹ

Advertisement

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ತಡೆಗೆ ರಾಜ್ಯ ಸರಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next