Advertisement

ರಾಜ್ಯಕ್ಕೆ ಮಹಾ ಕಂಟಕ; ಇಂದು ಮತ್ತೆ 257 ಜನರಿಗೆ ಕೋವಿಡ್ ಸೋಂಕು

06:24 PM Jun 04, 2020 | sudhir |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇಂದು ರಾಜ್ಯದಲ್ಲಿ ಮತ್ತೆ 257 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ.

Advertisement

ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 4320ಕ್ಕೆ ಏರಿಕೆಯಾಗಿದೆ. ಇದರಲ್ಲಿ 1610 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 57 ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

ರಾಜ್ಯದ ಹೆಚ್ಚಿನ ಜಿಲ್ಲೆಗಳಿಗೆ ಮಹಾರಾಷ್ಟ್ರದಿಂದ ಬಂದಿರುವ ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು ಸೋಂಕಿತರ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next