Advertisement

ರಾಜ್ಯದಲ್ಲಿ 317 ಪಾಸಿಟಿವ್‌ ಪತ್ತೆ: ಸೋಂಕಿನ ಪ್ರಮಾಣ ಹೆಚ್ಚಳ

07:23 PM Dec 15, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಬುಧವಾರ 317 ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಪ್ರಕರಣದಲ್ಲಿ ಏರಿಕೆ ಕಂಡು ಬಂದಿದೆ. ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದಾರೆ.

Advertisement

ಬೆಂಗಳೂರು ನಗರದಲ್ಲಿ 205, ಹಾಸನ 21, ಕೊಡಗು 20, ದ.ಕನ್ನಡ 16, ಬೆಳಗಾವಿ ಜಿಲ್ಲೆಯಲ್ಲಿ 12 ಪ್ರಕರಣ ದಾಖಲಾಗಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆರೆಳೆಣಿಕೆ ಪ್ರಕರಣ ದಾಖಲಾಗಿದೆ. ಉಳಿದಂತೆ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಕಲಬುರುಗಿ, ಗದಗ, ಚಿಕ್ಕಬಳ್ಳಾಪುರ, ಬೀದರ್‌, ಬಾಗಲಕೋಟೆ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ಬೆಂಗಳೂರು ನಗರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯಾದ್ಯಂತ ಒಟ್ಟು 7179 ಸಕ್ರಿಯ ಪ್ರಕರಣಗಳಿವೆ. 301 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next