Advertisement

ಮತ್ತೆ 124 ಸೋಂಕು ಪ್ರಕರಣ ಪತ್ತೆ

09:42 PM May 19, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಗುರುವಾರ 124 ಮಂದಿಯಲ್ಲಿ ಕೋವಿಡ್‌ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ. 0.64 ದಾಖಲಾಗಿದೆ.

Advertisement

19,141 ಮಂದಿ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು, 1,726 ಸಕ್ರಿಯ ಪ್ರಕರಣಗಳು ದಾಖಲಾಗಿವೆ. 159 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಸಂಬಂಧಿಸಿದಂತೆ ಯಾವುದೇ ಸಾವುಗಳು ದಾಖಲಾಗಿಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಟ್ಟಾರೆ  124 ಪ್ರಕರಣಗಳಲ್ಲಿ ಬೆಂಗಳೂರು ನಗರದಲ್ಲೇ 116 ಮಂದಿಯಲ್ಲಿ ಕೊರೊನಾ ವೈರಸ್‌ ಪತ್ತೆಯಾಗಿದೆ. ದಕ್ಷಿಣ ಕನ್ನಡ 4, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆದೆ. ಈವರೆಗೆ ಒಟ್ಟು 39.50 ಲಕ್ಷ ಮಂದಿಗೆ ಸೋಂಕು ತಗುಲಿದ್ದು, 39.08 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 40,064 ಮಂದಿ ಮರಣವನ್ನಪ್ಪಿದ್ದಾರೆ.

ಗುರುವಾರ 50,889 ಮಂದಿ ಕೋವಿಡ್‌ ಲಸಿಕೆ ಪಡೆದಿದ್ದಾರೆ. 5,869 ಮಂದಿ ಮೊದಲ ಡೋಸ್‌, 36,089 ಮಂದಿ ಎರಡನೇ ಡೋಸ್‌ ಮತ್ತು 10,134 ಮಂದಿ ಮೂರನೇ ಡೋಸ್‌ ಸ್ವೀಕರಿಸಿದ್ದಾರೆ. ಈವರೆಗೆ ಒಟ್ಟು 10.75 ಕೋಟಿ ಡೋಸ್‌ ಲಸಿಕೆ  ನೀಡಲಾಗಿದೆ ಎಂದು ಇಲಾಖೆಯ ಕೋವಿಡ್‌ ಬುಲೆಟಿನ್‌ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next