Advertisement

Karnataka: ದೇವಾಲಯ ಜೀರ್ಣೋದ್ಧಾರ ಅನುದಾನಕ್ಕೆ ಕತ್ತರಿ ಆದೇಶ ವಾಪಸ್‌

11:22 PM Aug 18, 2023 | Team Udayavani |

ಬೆಂಗಳೂರು: ರಾಜ್ಯದ ವಿವಿಧ ದೇವಾಲ ಯಗಳ ಅಭಿವೃದ್ಧಿ ಮತ್ತು ಜೀರ್ಣೋದ್ಧಾರಕ್ಕಾಗಿ 2022-23ನೇ ಸಾಲಿನಲ್ಲಿ, ಬಿಜೆಪಿ ಆಡಳಿತದ ಅವಧಿಯಲ್ಲಿ ಮಂಜೂರಾಗಿದ್ದ ಅನುದಾನಕ್ಕೆ ಕತ್ತರಿ ಹಾಕಿದ್ದ ಸರಕಾರವು, ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಅನುದಾನಕ್ಕೆ ಆದೇಶವನ್ನು ಹಿಂಪಡೆದಿದೆ.

Advertisement

ಸರಕಾರದಿಂದ ಜಿಲ್ಲಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಅಭಿವೃದ್ಧಿ/ ಜೀರ್ಣೋದ್ಧಾರಕ್ಕಾಗಿ ಮಂಜೂರಾದ ಅನುದಾನವನ್ನು ಬಿಡುಗಡೆ ಮಾಡಬಾರದು ಹಾಗೂ ಕಾಮಗಾರಿ ಪ್ರಾರಂಭಿಸದೆ ಇದ್ದಲ್ಲಿ, ಅದನ್ನು ಪ್ರಾರಂಭಿಸತಕ್ಕದ್ದಲ್ಲ ಎಂದು ಆ.14ರಂದು ಆದೇಶ ಹೊರಡಿಸಿತ್ತು. ಇದಕ್ಕೆ ವ್ಯಾಪಕ ಟೀಕೆ ಗಳು ವ್ಯಕ್ತ ವಾ ಗು ತ್ತಿ ದ್ದಂತೆ, ಶುಕ್ರವಾರ ಆದೇಶ ಹಿಂಪಡೆದಿದೆ.

ಅಲ್ಲದೆ, ನನ್ನ ಗಮನಕ್ಕೆ ಬಾರದೆ ದೇಗುಲಗಳ ಅನುದಾನಕ್ಕೆ ತಡೆ ನೀಡಲಾಗಿತ್ತು. ಆ ಆದೇಶ ವಾಪಸ್‌ ಪಡೆಯುವಂತೆ ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ದೇವಸ್ಥಾನಗಳ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನದ ಅಗತ್ಯ ಇದ್ದರೆ, ಬಿಡುಗಡೆ ಮಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಟ್ವೀಟ್‌ ಮೂಲಕ ಸಮಜಾಯಿಷಿ ನೀಡಿದ್ದಾರೆ.

ಹಿಂದಿನ ಆದೇಶದಲ್ಲಿ ಹೇಳಿದ್ದಿಷ್ಟು
ಸರಕಾರದಿಂದ ದೇವಾಲಯಗಳ ಅಭಿವೃದ್ಧಿ/ ಜೀರ್ಣೋದ್ಧಾರಕ್ಕಾಗಿ ಅನುದಾನ ಮಂಜೂರಾಗಿದ್ದು (ಮೂಲಗಳ ಪ್ರಕಾರ 70 ಕೋಟಿ ರೂ.ಗೂ ಅಧಿಕ), ಕಾಮಗಾರಿಗಳನ್ನು ಪ್ರಾರಂಭಿಸದೆ ಇರುವ ಸಂಸ್ಥೆಗಳಿಗೆ ಮುಂದಿನ ನಿರ್ದೇಶನದವರೆಗೆ ಹಣ ಬಿಡುಗಡೆ ಮಾಡಬಾರದು. 2022-23ನೇ ಸಾಲಿನಲ್ಲಿ ಮಂಜೂರಾಗಿರುವ ಅನುದಾನದ ಪೈಕಿ ಈಗಾಗಲೇ ಶೇ.50ರಷ್ಟು ಹಣ ಬಿಡುಗಡೆಯಾಗಿ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು, ಹಣ ಬಿಡುಗಡೆ ಮಾಡದಿದ್ದಲ್ಲಿ ಆ ಕಾಮಗಾರಿಗೆ ಹಣ ಬಿಡುಗಡೆ ಮಾಡಬಾರದು ಹಾಗೂ ಕಾಮಗಾರಿ ಪ್ರಾರಂಭಿಸಬಾರದು. ಅಲ್ಲದೆ, ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸ್ವೀಕಾರ ಆಗಿದ್ದಲ್ಲಿ, ಅವುಗಳಿಗೂ ಮಂಜೂರಾತಿ ತಡೆಹಿಡಿಯಬೇಕು ಎಂದು ಸೂಚಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next