Advertisement

ಸದಾಶಿವ ಆಯೋಗ ಶಿಫಾರಸು ಜಾರಿಗೆ ಆಗ್ರಹಿಸಿ ಪ್ರತಿಭಟನೆ

06:35 AM Jan 15, 2018 | Team Udayavani |

ಬೆಂಗಳೂರು: ನಿವೃತ್ತ ನ್ಯಾ. ಎ.ಜೆ.ಸದಾಶಿವ ಆಯೋಗದ ಶಿಫಾರಸು ಜಾರಿಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಸಂಘಟನೆಗಳು ಭಾನುವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದವು.

Advertisement

ಪರಿಶಿಷ್ಟ ಪಂಗಡದವರಿಗೆ ಒಳ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು, ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಮೌರ್ಯ ವೃತ್ತದಿಂದ ಹೊರಡಲು ಮುಂದಾದಾಗ ಪೊಲೀಸರು ತಡೆದು ಬ್ಯಾರಿಕೇಡ್‌ ಅಡ್ಡಹಾಕಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ಸಚಿವರಿಗೆ ತರಾಟೆ: ಈ ಮಧ್ಯೆ ಸದಾಶಿವ ಆಯೋಗದ ವರದಿ ಕುರಿತಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಅವರು ಪ್ರತಿಭಟನಾಕಾರರನ್ನು ಭೇಟಿಯಾಗಿ ಅವರ ಮನವೊಲಿಸಲು ಮುಂದಾದರು. ಆದರೆ, ವರದಿ ಜಾರಿ ಹೊರತುಪಡಿಸಿ ಬೇರೆ ಯಾವುದೇ ವಿಚಾರ ಕೇಳಲು ನಾವು ಬಯಸುವುದಿಲ್ಲ ಎಂದು ಪ್ರತಿಭಟನಾಕಾರರು ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ಹೋರಾಟಗಾರರೊಂದಿಗೆ
ಸಿಎಂ ಸಭೆ ಇಂದು

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗಾಗಿ ಪ್ರತಿಭಟಿಸುತ್ತಿರುವ ಹೋರಾಟ ಸಮಿತಿಯೊಂದಿಗೆ ಮುಖ್ಯಮಂತ್ರಿ
ಸಿದ್ದರಾಮಯ್ಯ ಸೋಮವಾರ ಸಭೆ ನಡೆಸಲಿದ್ದಾರೆ ಎಂದು ಸಚಿವ ಆಂಜನೇಯ ಸುದ್ದಿಗಾರರಿಗೆ ತಿಳಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ನ ದಲಿತ ಮುಖಂಡರೊಂದಿಗಿನ ಸಭೆಯಲ್ಲಿ ಮುಖ್ಯಮಂತ್ರಿಗಳೇ ಖುದ್ದಾಗಿ ಹೋರಾಟಗಾರರನ್ನು ಭೇಟಿ ಮಾಡಿ ಅವರ ಮನವೊಲಿಸುವ ಪ್ರಯತ್ನ ಮಾಡಬೇಕು ಎಂದು ನಿರ್ಧರಿಸಲಾಗಿದೆ. ಹೀಗಾಗಿ ಸೋಮವಾರ ಸಭೆಯ ನಿರ್ಣಯಗಳನ್ನು ಹೋರಾಟ ಸಮಿತಿಯೊಂದಿಗೆ ವಿನಿಮಯ ಮಾಡಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next