Advertisement

Karnataka: ಅನಧಿಕೃತ ಕಟ್ಟಡಗಳಿಗೆ ದುಪ್ಪಟ್ಟು ತೆರಿಗೆ ಬರೆ?

10:32 PM Dec 28, 2023 | Team Udayavani |

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಅನಧಿಕೃತ ಕಟ್ಟಡಗಳಿಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾದರಿಯಲ್ಲಿ ಏಕರೂಪದ ತೆರಿಗೆ ವಿಧಿಸಲು ಸರಕಾರ ಚಿಂತನೆ ನಡೆಸಿದ್ದು, ಇದರೊಂದಿಗೆ ನಿಯಮ ಉಲ್ಲಂ ಸಿ ಮನೆ ನಿರ್ಮಿಸಿಕೊಂಡವರಿಗೆ ದುಪ್ಪಟ್ಟು ತೆರಿಗೆ ಬರೆ ಬೀಳಲಿದೆ.

Advertisement

ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ಗುರುವಾರ ನಡೆದ ಬಿಬಿಎಂಪಿ ಕಾಯ್ದೆ 2020ರ ಕಲಂ 144 (6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ /ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಿಸುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ-ಬಾಧಕ ಪರಿಶೀಲಿಸಲು ಸೂಕ್ತ ತೀರ್ಮಾನ ಕೈಗೊಳ್ಳುವ ಸಲುವಾಗಿ ರಚಿಸಲಾಗಿರುವ ಉಪಸಮಿತಿ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ.

ಸಭೆಯಲ್ಲಿ ಉಪಸಮಿತಿ ಅಧ್ಯಕ್ಷ ಹಾಗೂ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಬಡಾವಣೆ ಅನುಮೋದನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂ ಸಿ ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ರೀತಿಯಲ್ಲೇ ರಾಜ್ಯಾದ್ಯಂತ ಏಕರೂಪವಾಗಿ ತೆರಿಗೆ ವಿಧಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ನಕ್ಷೆ ಮಂಜೂರು ಬಳಿಕ ಉಲ್ಲಂ ಸಿದರೂ ಕ್ರಮ

ಅಷ್ಟೇ ಅಲ್ಲ, ಇನ್ಮುಂದೆ ನಕ್ಷೆ ಮಂಜೂರಾತಿ ಪಡೆದ ಬಳಿಕ ನಿಯಮ ಉಲ್ಲಂ ಸಿ ಕಟ್ಟಡ ನಿರ್ಮಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದ ಸಚಿವರು, ನಿರ್ಮಾಣ ಹಂತದಲ್ಲೇ ಇಂತಹ ಕಟ್ಟಡ ಮಾಲಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈವರೆಗೆ ನಡೆದಿರುವ ಎಲ್ಲ ಸಭೆಗಳಲ್ಲಿ ನಡೆದ ಚರ್ಚೆಯ ಅಂಶಗಳನ್ನು ಕ್ರೋಢೀಕರಿಸಿ, ಮಸೂದೆ ರೂಪಿಸಲು ಮತ್ತು ಬಿಬಿಎಂಪಿಯಲ್ಲಿ “ಬಿ’ ಕಟ್ಟಡ ತೆರಿಗೆ ವಿಧಿಸುತ್ತಿರುವ ರೀತಿಯಲ್ಲೇ ರಾಜ್ಯದ ಇತರ ಪ್ರದೇಶಗಳಲ್ಲೂ ತೆರಿಗೆ ಸಂಗ್ರಹಿಸಲು ನಿಯಮಾವಳಿ ರೂಪಿಸುವಂತೆ ಸೂಚಿಸಿದರು.

Advertisement

ನ್ಯಾಯಸಮ್ಮತವಾಗಿ ಸಾರ್ವಜನಿಕ ಉದ್ದೇಶಕ್ಕೆ ಜಾಗ ಬಿಟ್ಟು ಬಡಾವಣೆ ನಿರ್ಮಿಸಲು ಮುಂದಾದರೆ ಮತ್ತು ಮನೆ ನಿರ್ಮಾಣ ಮಾಡಲು ನಿಯಮಾನುಸಾರ ನಕ್ಷೆ ಮಂಜೂರಾತಿ ಬಯಸಿದಲ್ಲಿ ನಿಯಮ ಸರಳಗೊಳಿಸಿ, ಮುಖಾಮುಖೀ ರಹಿತವಾಗಿ ನಿರ್ದಿಷ್ಟ ಕಾಲಮಿತಿಯೊಳಗೆ ಮಂಜೂರಾತಿ ಲಭಿಸುವಂತೆ ತಂತ್ರಾಂಶ ಅಭಿವೃದ್ಧಿಪಡಿಸುವ ಅಗತ್ಯವನ್ನೂ ಪ್ರತಿಪಾದಿಸಿದರು.

ಯಾರೊಬ್ಬರೂ ನಕಲಿ ಖಾತೆ ಪಡೆದು ನೋಂದಣಿ ಮಾಡಿಸದಂತೆ ಕಾವೇರಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದರೆ ಆಗ ಅನಧಿಕೃತ ಬಡಾವಣೆ, ಕಟ್ಟಡಗಳನ್ನು ನಿಯಂತ್ರಿಸಬಹುದು. ನೂತನವಾಗಿ ಯಾವುದೇ ಸಮುಚ್ಚಯಗಳನ್ನು, ಗುಂಪು ಮನೆಗಳನ್ನು ಮತ್ತು ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವಾಗ ವಾಯು, ಜಲ ಸಹಿತ ಪರಿಸರ ಸಂರಕ್ಷಣೆ ಕಾಯ್ದೆ ಉಲ್ಲಂ ಸಿ ಕಟ್ಟಡ ನಿರ್ಮಿಸುವವರ ವಿರುದ್ಧ ಕಾನೂನು ರೀತಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್‌ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ಸಿಂಗ್‌ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next