ಶಿಲ್ಲಾಂಗ್ : ಈ ವರ್ಷ ಫೆಬ್ರವರಿಯಲ್ಲಿ ಮೇಘಾಲಯದಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಕಾಂಗ್ರೆಸ್ ಪಕ್ಷವನ್ನು ರಾಜ್ಯಪಾಲರು ಸರಕಾರ ರಚನೆಗೆ ಆಹ್ವಾನಿಸದಿರುವುದಕ್ಕೆ ಇಂದು ಕಾಂಗ್ರೆಸ್ ಪಕ್ಷ, ಕರ್ನಾಟಕ ಸ್ಫೂರ್ತಿಯಲ್ಲಿ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು.
ಮಾತ್ರವಲ್ಲದೆ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರಿಗೆ ಮನವಿಯನ್ನು ಕಳುಹಿಸಿ ಪ್ರಜಾತಾಂತ್ರಿಕ ತತ್ವಗಳನ್ನು ಮತ್ತು ಸಂವಿಧಾನದ ಪಾವಿತ್ರ್ಯವನ್ನು ರಕ್ಷಿಸುವಂತೆ ಆಗ್ರಹಿಸಿತು.
ಮೇಘಾಲಯ ರಾಜ್ಯಪಾಲ ಗಂಗಾ ಪ್ರಸಾದ್ ಅವರು ಪ್ರಕೃತ ಶಿಲ್ಲಾಂಗ್‌ನಲ್ಲಿ ಇಲ್ಲದಿರುವುದು ಕಾಂಗ್ರೆಸ್ ಪ್ರತಿಭಟನಕಾರರು ತಮ್ಮ ಮನವಿಯನ್ನು ರಾಷ್ಟ್ರಪತಿಗೆ ನೇರವಾಗಿ ರವಾನಿಸಿದರು.