Advertisement

karnataka election 2023: ಎ.21-22ಕ್ಕೆ ರಾಜ್ಯದಲ್ಲಿ ಅಮಿತ್‌ ಶಾ ರೋಡ್‌ ಶೋ

09:52 PM Apr 18, 2023 | Team Udayavani |

ನವದೆಹಲಿ: ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿ ನಾಮಪತ್ರ ಪ್ರಕ್ರಿಯೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

Advertisement

ಇದೇ 21-22ರಂದು ರಾಜ್ಯ ಪ್ರವಾಸ ಕೈಗೊಳ್ಳಲಿರುವ ಅವರು ದಾವಣಗೆರೆ ಮತ್ತು ದೇವನಹಳ್ಳಿಯಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಹಾಗೆಯೇ, ಹಲವಾರು ಸಂಘಟನಾತ್ಮಕ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ, ಅಮಿತ್‌ ಶಾ ಅವರು ಏ.20ರಿಂದ 23ರ ವರೆಗೆ ದಕ್ಷಿಣ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಮೊದಲ ದಿನ ಮತ್ತು ಕಡೇ ದಿನ ತೆಲಂಗಾಣದಲ್ಲಿ ಇರಲಿದ್ದಾರೆ.

ಕರ್ನಾಟಕದ ನಾಯಕರೊಂದಿಗೆ ಮಾತುಕತೆ ನಡೆಸಿ, ಚುನಾವಣಾ ಪ್ರಚಾರದ ರೂಪುರೇಷೆಗಳನ್ನು ಮಾಡಿಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next