Advertisement
ಸುಳ್ಯ: ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯಕುಕ್ಕೆಗೆ ಭೇಟಿ ನೀಡಿದರು. ಬಳಿಕ ಸುಳ್ಯದಲ್ಲಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕೆ.ಅಣ್ಣಾಮಲೈ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ, ಸಚಿವ ಎಸ್. ಅಂಗಾರ ಸಹಿತ ಹಲವು ಮುಖಂಡರಿದ್ದರು. ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಮಾಜಿ ಸಚಿವ ಯು.ಟಿ. ಖಾದರ್, ಪಕ್ಷದ ವಕ್ತಾರೆ ಭವ್ಯ ನರಸಿಂ ಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ವಿವಿಧೆಡೆ ಪ್ರಚಾರ ನಡೆಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೆಡಿಎಸ್‌ನ ನಿಖೀಲ್ ಭೇಟಿ ನೀಡಿ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಆಶೀರ್ವಾದ ಪಡೆದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.
Related Articles
Advertisement
ಮಂಗಳೂರು ನಗರ ಉತ್ತರ: ಬಿಜೆಪಿ ಅಭ್ಯರ್ಥಿ ಡಾ|ವೈ ಭರತ್ ಶೆಟ್ಟಿ ನಾಮಪತ್ರ ಸಲ್ಲಿಕೆ ಸಂದರ್ಭ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಹಲವು ಮುಖಂಡರು ಇದ್ದರು. ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ಬಿಡುಗಡೆ ಯಾದರೂ ಅದರಲ್ಲಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಯನ್ನು ಘೋಷಿಸಲಿಲ್ಲ.
ಹುರಿಯಾಳುಗಳ ನಾಮಪತ್ರ ಸಲ್ಲಿಕೆಉಡುಪಿ: ಜಿಲ್ಲೆಯಲ್ಲೂ ನಾಮಪತ್ರ ಸಲ್ಲಿಕೆಯದ್ದೇ ಭರಾಟೆ. ಒಟ್ಟು 9 ಮಂದಿ ನಾಮಪತ್ರ ಸಲ್ಲಿಸಿದರು.
ಕಾಪು: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಅವರು ಉಡುಪಿ ಶ್ರೀ ಕೃಷ್ಣ ಮಠ ಸೇರಿದಂತೆ ವಿವಿಧ ಧರ್ಮಗಳ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದರು. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಕ್ಷೇತ್ರದ ವಿವಿಧೆಡೆ ಕಾರ್ಯಕರ್ತರ ಸಭೆ ನಡೆಸಿ, ಬಳಿಕ ಶೃಂಗೇರಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಕಾರ್ಕಳ: ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ ಶೆಟ್ಟಿ ಮುನಿ ಯಾಲು ಸ್ಥಳೀಯ ದೇವಸ್ಥಾನ ಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ದುರ್ಗ, ಕುಕ್ಕುಂದೂರುವಿನಲ್ಲಿ ಪ್ರಚಾರ ಸಭೆ ನಡೆಸಿದರು. ಬೈಂದೂರು: ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಸಮಾವೇಶ ನಡೆಸಿದರು. ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ವಿವಿಧೆಡೆ ಪ್ರಚಾರ ನಡೆಸಿದರು. ಸೌಕೂರು ಸಹಿತ ವಿವಿಧ ದೇಗುಲಗಳಿಗೆ ಭೇಟಿ ನೀಡಿದರು. ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಕ್ಷೇತ್ರ ವ್ಯಾಪ್ತಿಯ ನಾಗಬನ, ಭಜನ ಮಂದಿರಕ್ಕೆ ಭೇಟಿ ನೀಡಿದರು. ಬ್ರಹ್ಮಾವರ, ಕರ್ಜೆ, ಚಾಂತಾರು ಭಾಗದ ಕಾರ್ಯಕರ್ತರ ಸಭೆ ನಡೆಸಿದರು. ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಸುವರ್ಣ ಸಂಘಟನೆಗಳೊಂದಿಗೆ ಚರ್ಚಿಸಿದರು. ಕುಂದಾಪುರ: ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಪ್ರಚಾರದಲ್ಲಿ ನಿರತರಾಗಿದ್ದರು. ಬಿಜೆಪಿ ಅಭ್ಯರ್ಥಿ ಕಿರಣ್ ಕೊಡ್ಗಿ ಅವರು ವಿವಿಧೆಡೆ ಕಾರ್ಯಕರ್ತರ ಸಭೆ ನಡೆಸಿದರು. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭಾಗಿಯಾಗಿದ್ದರು.