Advertisement

Karnataka Election 2023: ಕೋವಿಡ್‌ ವೇಳೆ ಜನರಿಗೆ ನೆರವು: ಸಚಿವ ಕೆ.ಗೋಪಾಲಯ್ಯ

10:03 AM Apr 29, 2023 | Team Udayavani |

ಬೆಂಗಳೂರು: ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ 350 ಕ್ಕೂ ಹೆಚ್ಚಿನ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಪೂರೈಸಿ ಕ್ಷೇತ್ರದ ಜನತೆಯ ಉಳಿವಿಗಾಗಿ ಶ್ರಮಿಸಿರುವುದಾಗಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

Advertisement

ಶುಕ್ರವಾರ ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ ಶಕ್ತಿ ಗಣಪತಿ ನಗರದ 74ನೇ ವಾರ್ಡಿನಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದರು. ಶಾಸಕನಾಗಿ, ಸಚಿವನಾಗಿ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ
ನೀಡಿದ್ದೇನೆ. ಕ್ಷೇತ್ರದಲ್ಲಿ ಕುಡಿಯುವ ನೀರಿನ ಘಟಕ, ನವ ನಂದಿನಿ ಪಾರ್ಕ್‌, ಆರೋಗ್ಯದ ಕಾಳಜಿಯಿಂದ ಉತ್ತಮ
ಆಸ್ಪತ್ರೆಗಳನ್ನು ಕಲ್ಪಿಸಿರುವುದಾಗಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಉತ್ತಮ ಕೊಡುಗೆ ನೀಡಿದ್ದು, ಬಿಜೆಪಿ ಏಕಾಂಗಿಯಾಗಿ ಅಧಿಕಾರಕ್ಕೆ ಬರಲಿದೆ
ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಮಾಜಿ ಶಾಸಕರಾದ ನೆ.ಲ. ನರೇಂದ್ರಬಾಬು, ಕ್ಷೇತ್ರದ ಚುನಾವಣೆ ಉಸ್ತುವಾರಿ ಇಮಾನ್‌, ಬಿಬಿಎಂಪಿ
ಮಾಜಿ ಸದಸ್ಯೆ ಪದ್ಮಾವತಿ ಶ್ರೀನಿವಾಸ್‌, ಜಯಸಿಂಹ,ಬಿ.ಡಿ ಶ್ರೀನಿವಾಸ್‌, ನಿಸರ್ಗ ಜಗದೀಶ್‌ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next