Advertisement
ಕೊಪ್ಪಳದ ಕರಡಿ ಸಂಗಣ್ಣ ಅವರೂ ಬಿಜೆಪಿ ಟಿಕೆಟ್ ಸಿಗದಿದ್ದರೆ ಜೆಡಿಎಸ್‌ಗೆ ಬರುವುದಾಗಿ ಹೇಳಿದ್ದರಾ ದರೂ, ಅವರ ಸೊಸೆಗೆ ಬಿಜೆಪಿ ಟಿಕೆಟ್ ಸಿಕ್ಕಿರುವುದರಿಂದ ಅವರ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.
ಮತ್ತೂಂದೆಡೆ ಪುಲಕೇಶಿ ನಗರದಲ್ಲಿ ಕಾಂಗ್ರೆಸ್ ಟಿಕೆಟ್ ತಪ್ಪಿಸಿಕೊಂಡಿರುವ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಜೆಡಿಎಸ್ ಮುಖಂಡರು ಸಂಪರ್ಕ ಮಾಡಿದ್ದಾರೆ. ಆದರೆ, ಅವರು ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧೆಗೆ ಒಲವು ಹೊಂದಿದ್ದು ಯಾವುದಕ್ಕೂ ಕಾಲಾವಕಾಶ ಕೇಳಿದ್ದಾರೆ ಎಂದು ಹೇಳಲಾಗಿದೆ.
ಕಲ್ಯಾಣ ಕರ್ನಾಟಕದ ಹಲವು ಮುಖಂಡರು ಜೆಡಿಎಸ್ ಸೇರಲು ಮುಂದಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯ ಎಲ್ಲ ಕ್ಷೇತ್ರಗಳ ಟಿಕೆಟ್ ಘೋಷಣೆಯಾದ ಬಳಿಕ ಸ್ಪಷ್ಟತೆ ಸಿಗಲಿದೆ.